Mumbai

ಟಿಆರ್ ಪಿ ಹಗರಣ; ರಿಪಬ್ಲಿಕ್ ಟಿವಿ ಸಿಇಒ ಗೈರು ಹಾಜರು

ಮುಂಬೈ, ಅ 10- ಟಿಆರ್‌ಪಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಶಿವ ಸುಬ್ರಮಣ್ಯಂ ಸುಂದರಂ ಶನಿವಾರ ನಗರ ಪೊಲೀಸರ ಗೈರು ಹಾಜರಾಗಿ, ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಅರ್ಜಿ ದಾಖಲಿಸಲಾಗಿದ್ದು, ನ್ಯಾಯಾಲಯದ ಮುಂದೆ ವಿಚಾರಣೆ ಬಾಕಿ ಇದೆ ಎಂದು ಹೇಳಿದ್ದಾರೆ.

ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ ಪಿ) ವಂಚನೆ ದಂಧೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಈ ಹಿಂದೆ ಸುಂದರಂಗೆ ಸಮನ್ಸ್ ನೀಡಿ ಶನಿವಾರ ಬೆಳಿಗ್ಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿದ್ದರು.

ತಾವು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತ್ವರಿತ ವಿಚಾರಣೆಯನ್ನು ನಿರೀಕ್ಷಿಸಲಾಗಿದೆ. ಅದರ ನಂತರವೇ ಸುಪ್ರೀಂಕೋರ್ಟ್ ನ ಆದೇಶಕ್ಕೊಳಪಟ್ಟು ತನಿಖೆಗೆ ಒಳಪಡುವುದಾಗಿ ಮುಂಬೈ ಪೊಲೀಸರಿಗೆ ಬರೆದ ಪತ್ರದಲ್ಲಿ ಸುಂದರಂ ಹೇಳಿದ್ದಾರೆ.

ನಗರ ಅಪರಾಧ ಶಾಖೆಯ ಅಪರಾಧ ಗುಪ್ತಚರ ಘಟಕ (ಸಿಐಯು) ಟಿಆರ್‌ಪಿ ವಂಚನೆ ದಂಧೆಯ ಬಗ್ಗೆ ತನಿಖೆ ನಡೆಸುತ್ತಿದೆ. ಸುಳ್ಳು ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಟಿವಿಯ ಆದಾಯದ ಅಂಶವನ್ನು ತನಿಖೆ ಮಾಡಲು ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಸಹ ತನಿಖೆಗೆ ಜತೆಗೂಡಿದೆ.
ಈ ಪ್ರಕರಣದಲ್ಲಿ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!