Vijayapur

ಸಿಡಿಲು ಬಡಿದು ತಾಯಿ, ಮಗಳು ಸಾವು

ವಿಜಯಪುರ, ಅ 10 -ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಪುತ್ರಿ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಮೃತರನ್ನು ಮಹಾದೇವಿ ಭಜಂತ್ರಿ (43) ಮತ್ತು ಆಕೆಯ ಪುತ್ತಿ ಸೋನಿ ಭಜಂತ್ರಿ (12) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಮಹಾದೇವಿ ಪತಿ ಯಂಕಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನತದೃಷ್ಟರು ಮರದ ಕೆಳಗೆ ಆಶ್ರಯ ಪಡೆದಿದ್ದಾಗ ಸಿಡಿಲು ಬಡಿದಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹದ ಸಂಕಷ್ಟದ ನಡುವೆ ಸಿಡಿಲಿನ ಅನಾಹುತಗಳು ಆಗಿಂದಾಗ್ಗೆ ಸಂಭವಿಸುತ್ತಿವೆ.

Leave a Reply

Your email address will not be published. Required fields are marked *

Back to top button
error: Content is protected !!