Bengaluru

ಸಚಿವ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು,ಅ 10- ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ ಕುಮಾರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯ ಸಲಹೆಯ ಮೇರೆಗೆ ಇದೀಗ ಆಸ್ಪತ್ರೆಗೆ ಕೊರೋನಾ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು.

ಇಂದು ಕೊರೋನಾ ಸೋಂಕಿಗೆ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ ಹಿನ್ನಲೆಯಲ್ಲಿ, ಜಯನಗರದ ಬಿಐಜಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.ಈ ಮೂಲಕ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ದಾಖಲಾಗಿ ಸಚಿವ ಸುರೇಶ ಕುಮಾರ ಚಿಕಿತ್ಸೆ ಪಡೆಯಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!