Karwar

ಶಿರಸಿ-ಕುಮಟಾ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ

 

ಕಾರವಾರ, ಅ.10- ಉತ್ತರಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆರಿಸುವ ಕಾಮಗಾರಿ ಆರಂಭದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಕ್ಟೋರಬ್ 12 ರಿಂದ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ ಮುಂದಿನ 18 ತಿಂಗಳ ಅವಧಿಯಲ್ಲಿ ಜಾರಿಯಲ್ಲಿರಲಿದೆ. ಕರಾವಳಿ ಮತ್ತು ಹುಬ್ಬಳ್ಳಿ, ಹಾವೇರಿ ಭಾಗಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಘುವಾಹನಗಳು ಕುಮಟಾದಿಂದ ಸಿದ್ದಾಪುರದ ಮೂಲಕ ಸಾಗಿ ಶಿರಸಿಗೆ ತಲುಪುವುದು. ಇನ್ನೊಂದು ಅಂಕೋಲಾದಿಂದ ಯಲ್ಲಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಾಗಿ ಶಿರಸಿಗೆ ಹೋಗುವುದು. ಹಾಗೂ ಹೊನ್ನಾವರದಿಂದ ಮಾವಿನಗುಂಡಿ ಮೂಲಕ ಸಾಗಿ ಸಿದ್ದಾಪುರಕ್ಕೆ ಹೋಗಿ ಶಿರಸಿಗೆ ತಲುಪಬಹುದು. ಈ ರಸ್ತೆಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!