Karwar

ಹೊನ್ನಾವರ ತಾಲೂಕು ಇಕೋ ಬೀಚ್ ಗೆ ಅಂತಾರಾಷ್ಟ್ರೀಯ ಮನ್ನಣೆ

 

ಕಾರವಾರ, ಅಕ್ಟೊಬರ್ 11- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡಿನ ಇಕೋ ಬೀಚ್ ಗೆ ‘ಬ್ಲ್ಯೂ ಫ್ಲಾಗ್’ ಬೀಚ್ ಎಂಬ ಅಂತಾ ರಾಷ್ಟ್ರೀಯ ಕೀರ್ತಿಗೆ ಭಾಜನವಾಗಿದೆ .

ಡೆನ್ಮಾರ್ಕ್ನ ಪರಿಸರ ಶಿಕ್ಷಣ ಪ್ರತಿಷ್ಠಾನ ಪರಿಶೀಲನೆ ಬಳಿಕ “ಬ್ಲ್ಯೂ ಫ್ಲಾಗ್’ ಪ್ರಮಾಣಪತ್ರ ನೀಡಿದೆ. ಹೊನ್ನಾವರ ತಾಲ್ಲೂಕಿನ ಕಾಸರಕೋಡಿನಲ್ಲಿರುವ ಇಕೋ ಬೀಚ್ ಇದೀಗ ಅಂತಾರಾಷ್ಟ್ರೀಯ ಮಟ್ಟದ ಬೀಚ್ ಆಗಿ ಮೇಲ್ದರ್ಜೆಗೇರಿದೆ. ಕಡಲತೀರಕ್ಕೆ ಬರುವ ಪ್ರವಾಸಿಗರಿಗೆ ಎಲ್ಲ ರೀತಿಯ ಮೂಲ ಸೌಲಭ್ಯಗಳಾದ ಕುಳಿತುಕೊಳ್ಳುವ ಆಸನದಿಂದ ಹಿಡಿದು ಕುಡಿಯುವ ನೀರು, ಮಕ್ಕಳ ಆಟಿಕೆಗಳು, ಜೀವರಕ್ಷಕ ಸಿಬ್ಬಂದಿ ಹಾಗೂ ಮುಖ್ಯವಾಗಿ ಕಡಲತೀರದ ಸ್ವಚ್ಛತೆ ಕಾಯ್ದುಕೊಳ್ಳಲು ಪ್ರತ್ಯೇಕ ಸಿಬ್ಬಂದಿ ವ್ಯವಸ್ಥೆ ನೇಮಿಸಲಾಗಿದೆ.

ಇಲ್ಲಿಗೆ ಬರುವ ಪ್ರವಾಸಿಗರಿಗೆ ಸ್ವಚ್ಛ ಕಡಲ ತೀರದ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರಿಂದ ದೇಶ, ವಿದೇಶಗಳ ಪ್ರವಾಸಿಗರನ್ನೂ ಇತ್ತ ಸೆಳೆಯುವಲ್ಲಿ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *

Back to top button
error: Content is protected !!