Mumbai

ಸುಳ್ಳು ಆರೋಪ: ಕಾನೂನು ಸಮರಕ್ಕೆ ಮುಂದಾದ ನಟಿ ರಿಯಾ

ಮುಂಬೈ, ಅ 12 – ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಆದರೆ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದವರ ವಿರುದ್ಧ ನಟಿ ರಿಯಾ ಕಾನೂನು ಸಮರ ಸಾರಲು ನಿರ್ಧರಿಸಿದ್ದಾರೆ.

ತಮ್ಮ ಮೇಲೆ ಅನೇಕರು ಅನೇಕ ಕ ಆರೋಪಗಳನ್ನು ಹೊರಿಸಿದ್ದಾರೆ ಆದರೆ ಇವುಗಳಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುದು ತನಿಖೆ ನಂತರವೇ ಗೊತ್ತಾಗಬೇಕಿದೆ ಎಂದರು.

ಮಾದಕ ವಸ್ತು ಜಾಲದ ಜೊತೆ ನಂಟು ಹೊಂದಿರುವ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರಿಯಾ ಈಗ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.

ರಿಯಾ ವಿರುದ್ಧ ಟಿವಿ ಚಾನಲ್ಗಳ ಮೂಲಕ ಇಲ್ಲಸಲ್ಲದ ಆರೋಪ ಮಾಡಿದವರ ಹೆಸರನ್ನು ಸಿಬಿಐಗೆ ನೀಡಿ ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ರಿಯಾ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!