Hyderabad

ತೆಲಂಗಾಣ 14 ಜಿಲ್ಲೆಗಳಲ್ಲಿ ಪ್ರವಾಹ; ರಜೆ ಘೋಷಣೆ

ಹೈದರಾಬಾದ್, ಅ 14- ಹೈದರಾಬಾದ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇದುವರೆಗೆ 15 ಮಂದಿ ಮೃತಪಟ್ಟಿದ್ದು ಮತ್ತೆ ಕೆಲವರು ಕಣ್ಮರೆಯಾಗಿದ್ದಾರೆ.

ತೆಲಂಗಾಣದ 14 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ್ದಾರೆ.

ಹೈದರಾಬಾದ್ ನ ಶಂಶಾಬಾದ್ ನ ಗಗನ್ ಪಹಾದ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ , ಸಂಬಂಧಿ ಅನಾಹುತದಿಂದ 15 ಮಂದಿ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮತ್ತು ನಾಳೆ ರಜೆ ಘೋಷಿಸಿದೆ. ಹೆಚ್ಚು ಮಳೆ ಬರುವ ನಿರೀಕ್ಷೆ ಇರುವುದರಿಂದ ಜನರು ಹೊರ ಬರಬಾರದು ಎಂದು ತೆಲಂಗಾಣ ಸಚಿವ ಕೆಟಿ ರಾಮರಾವ್ ಮನವಿ ಮಾಡಿದ್ದಾರೆ.

ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೈದರಾಬಾದ್ ನಲ್ಲಿ ಕಾಂಪೌಂಡ್ ಗೋಡೆ ಕುಸಿದು ಭಾರಿ ಅನಾಹುತವಾಗಿದೆ. ತೆಲಂಗಾಣದ 14 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈದರಾಬಾದ್ ನ ಹಲವು ಪ್ರದೇಶಗಳು ಜಲಾವೃತಗೊಂಡಿದೆ.

ಭೀಕರ ಪರಿಸ್ಥಿತಿಯಿಂದಾಗಿ ನಿನ್ನೆ ರಾತ್ರಿ ಹೈದರಾಬಾದ್ ಗೆ ನೀರು ಸರಬರಾಜು ಮಾಡುವ ಹಿಮಯತ್ ಸಾಗರ ಅಣೆಕಟ್ಟಿನ ಗೇಟ್ ಗಳನ್ನು ಅಧಿಕಾರಿಗಳು ತೆರೆದಿದ್ದು ಇದರಿಂದಾಗಿ ಹೈದರಾಬಾದ್ ನಲ್ಲಿ ಮತ್ತಷ್ಟು ಪ್ರವಾಹದ ಭೀತಿ ಎದುರಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!