Mysore

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಮೈಸೂರು, ಅ 17- ಕರೋನ ಆತಂಕದ ನಡುವೆಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಡಾ.ಸಿ.ಎನ್. ಮಂಜುನಾಥ್ ಅವರು ಶನಿವಾರ ಚಾಲನೆ ನೀಡಿದರು.

ಇದರಿಂದ ಸಾಂಸ್ಕೃತಿಕ ನಗರಿಯಲ್ಲಿ ದಸರಾ ಚಟುವಟಿಕೆಗಳು ಗರಿಕೆದರಿವೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದೆ.

ಇಂದು ಬೆಳಿಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ನವರಾತ್ರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು .

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ.

ಸೋಮಶೇಖರ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸೇರಿದಂತೆ ಅನೇಕ ಗಣ್ಯರು ಭಾಗಿಯಾಯಾಗಿದ್ದರು .

Leave a Reply

Your email address will not be published. Required fields are marked *

Back to top button
error: Content is protected !!