Mumbai

ಕಂಗನಾ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ಮುಂಬೈ ನ್ಯಾಯಾಲಯ ಆದೇಶ

ಮುಂಬೈ, ಅ 17- ಕೋಮುಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮುಂಬೈ ನ್ಯಾಯಾಲಯವೊಂದು ಪೊಲೀಸರಿಗೆ ಸೂಚಿಸಿದೆ.

ಜನರ ನಡುವೆ ವಿಭಜನೆ ಸೃಷ್ಟಿಸುವಂತೆ ಆಕ್ಷೇಪಾರ್ಹವಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ದೂರು ಸ್ವೀಕರಿಸಿದ ನ್ಯಾಯಾಲಯ ಆಕೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ಸಾವಿನ ಬಗ್ಗೆ ಮಹಾರಾಷ್ಟ್ರ ಪೊಲೀಸರು, ಕೇಂದ್ರೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಸಮಯದಲ್ಲಿ ಜನಸಾಮಾನ್ಯರಲ್ಲಿ ಸಂಶಯ ಮೂಡುವಂತಹ ವಿವಾದಸ್ಪದ ಟ್ವೀಟ್ ಗಳ ಮೂಲಕ ಕಂಗನಾ ರಣಾವತ್ ಮುಂಬೈ ನಗರವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ರಂಗೋಲಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಮುಂಬೈನ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರ್ದೇಶನ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಡಿ ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!