Mysore

ಪ್ರವಾಹ ಪೀಡಿತ ಉತ್ತರ ಕರ್ನಾಟಕ ಭಾಗದಲ್ಲಿ ಮುಖ್ಯಮಂತ್ರಿ ಪ್ರವಾಸ

ಮೈಸೂರು, ಅ 17- ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಭಾಗಕ್ಕೆ ಶೀಘ್ರ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ಧಾರೆ.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾಹಿತಿ ಸಂಗ್ರಹಿಸುವ ಕೆಲಸ ಸಹ ನಡೆಯಲಿದ್ದು, ಪರಿಹಾರದ ವಿಚಾರವಾಗಿಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ಧಾರೆ.

ನೆರೆ ವಿಚಾರವಾಗಿ ಈಗಾಗಲೇ ಅಲ್ಲಿನ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಪ್ರಾಥಮಿಕ ಮಾಹಿತಿ ಪಡೆಯಲಾಗಿದೆ ಎಂದರು.

ನೆರೆ ಸಂತ್ರಸ್ತರ ಜೊತೆ ಸರ್ಕಾರವಿದೆ. ಸರಕಾರದಲ್ಲಿ ಹಣದ ಕೊರತೆ ಇಲ್ಲ. ಈಗಾಗಲೇ ನೆರೆ ಕಂಡುಬಂದ ಪ್ರದೇಶಗಳಿಗೆ ಕಂದಾಯ ಸಚಿವರು ಹೋಗಿದ್ದಾರೆ. ಮತ್ತಷ್ಟು ಸಚಿವರು, ಉಸ್ತುವಾರಿ ಸಚಿವರು ಮುಂದಿನ ದಿನಗಳಲ್ಲಿ ತೆರಳಲಿದ್ದಾರೆ ಎಂದರು.

ಸರ್ಕಾರ ನೋಂದವರಿಗೆ ಪರಿಹಾರ ಒದಗಿಸಲಿದೆ. ಎಂದ ಅವರು ಜೊತೆಗೆ ಮನೆ ಕಳೆದುಕೊಂಡವರಿಗೂ ಪರಿಹಾರ ನೀಡುತ್ತೇವೆ ಎಂದು ಸಿಎಂ ಭರವಸೆ ನೀಡಿದರು.

Leave a Reply

Your email address will not be published. Required fields are marked *

Back to top button
error: Content is protected !!