Mysore

ಮನೆ ಕಳೆದುಕೊಂಡವರಿಗೆ ತಕ್ಷಣಕ್ಕೆ 10 ಸಾವಿರ ರೂ ನೆರವು : ಯಡಿಯೂರಪ್ಪ

ಮೈಸೂರು, ಅ 17- ಪ್ರವಾಹದಿಂದ ಮನೆ ಕಳೆದುಕೊಂಡ ಜನರಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರದಿಂದ ಪರಿಹಾರ, ನೆರವು ಪಡೆಯುವ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.
ಇನ್ನು ಉತ್ತರ ಕರ್ನಾಟಕದ ನೆರೆ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿ.12 ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿ ಪಡೆಯಲಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ವಾರದೊಳಗೆ ಅಂದಾಜು ನಷ್ಟದ ವರದಿ ಸಲ್ಲಿಸುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದರು.

ಅನುದಾನದ ಕೊರತೆ ಇಲ್ಲ, ಎನ್ಡಿಆರ್ಎಫ್ ನಿಧಿಯಲ್ಲಿ ಹಾನಿಯಾದವರಿಗೆ, ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು. ತಕ್ಷಣಕ್ಕೆ ಹಾನಿಗೊಳಗಾದವರಿಗೆ 10 ಸಾವಿರ ನೀಡಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಚುನಾವಣೆಯ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಶಿರಾ ಮತ್ತು ಆರ್ ಅರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಗೆಲುವಿನ ಅಂತರವಷ್ಟೇ ಬಾಕಿಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!