Entertainment

ಆಕ್ಟ್ 1978 ಮುಂದಿನ ತಿಂಗಳು ತೆರೆಗೆ

ಬೆಂಗಳೂರು, ಅ 19- ಸೆನ್ಸಾರ್ ಮಂಡಳಿಯಿಂದ ‘ಯು’ ಪ್ರಮಾಣ ಪತ್ರ ಪಡೆದಿರುವ ‘ಆಕ್ಟ್ 1978’ ಸಿನೆಮಾ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಸಿನಿಮಾ ಮಂದಿರಕ್ಕೆ ಪ್ರೇಕ್ಷಕರು ಬರುತ್ತಾರೋ, ಇಲ್ಲವೋ ಅನ್ನುವ ಆತಂಕದ ಮಧ್ಯೆ ಅನೇಕರು ಈಗಾಗಲೇ ಬಿಡುಗಡೆಯಾದ ಚಿತ್ರಗಳನ್ನು ಮರು ಬಿಡುಗಡೆ ಮಾಡಿದ್ದಾರೆ. ಆತಂಕದ ನಡುವೆಯೂ ಜನರು ಉತ್ಸಾಹದಿಂದ ಬರುತ್ತಿದ್ದಾರೆ. ಜನರ ಪ್ರತಿಕ್ರಿಯೆ ಕಂಡು ನಮಗೂ ವಿಶ್ವಾಸ ಮೂಡಿದ್ದು, ‘ಆಕ್ಟ್ 1978’ ಸಿನಿಮಾವನ್ನು ಇದೇ ನವೆಂಬರ್ ನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಸಿನೆಮಾ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ.
ಈಗಾಗಲೇ ಸಿನಿಮಾದ ಪೋಸ್ಟರ್ ಮತು ಟೈಟಲ್ ನೋಡಿದ ಅನೇಕರು, ಕುತೂಹಲದಿಂದ ಹುಬ್ಬೇರಿಸಿದ್ದಾರೆ.

ಆಕ್ಟ್ 1978 ರ ಸಾರಥ್ಯವನ್ನು ಮಂಸೋರೆ ವಹಿಸಿದ್ದರೆ, ದೇವರಾಜ್ ಆರ್ ನಿರ್ಮಾಪಕರು. ಯಜ್ಞಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಕೃಷ್ಣಾ ಹೆಬ್ಬಾಳೆ, ಶ್ರುತಿ, ದತ್ತಣ್ಣಾ, ಸಂಚಾರಿ ವಿಜಯ್, ಶರಣ್ಯ, ಶೋಭರಾಜ್, ಅವಿನಾಶ್, ರಾಘು ಶಿವಮೊಗ್ಗ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!