Mysore

ನವೆಂಬರ್‌ನಿಂದ ಪದವಿ ಕಾಲೇಜು ಆರಂಭ : ಮುಖ್ಯಮಂತ್ರಿ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ

ಮೈಸೂರು,ಅ 19- ನವೆಂಬರ್‌ನಿಂದ ಆಫ್‌ ಲೈನ್ ನಲ್ಲಿ ಪದವಿ ತರಗತಿಗಳನ್ನು ಆರಂಭಿಸಲು ಸರ ಕಾರ ತಯಾರಿ ಮಾಡಿಕೊಳ್ಳುತ್ತಿದೆ.ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಸಂಬಂಧ ಪಟ್ಟವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಮೈಸೂರು ವಿವಿಯ100 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತ ನಾಡಿದ ಅವರು,ಕೋವಿಡ್‌ ಸಂಕಷ್ಟ ಕಾಲದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವುದಕ್ಕೂ ಸಿನಿಮಾ ಟಾಕೀಸ್‌ಗಳನ್ನು ತೆರೆಯುವುದಕ್ಕೂ ಪರಸ್ಪರ ಹೋಲಿಸುವುದು ಸರಿಯಲ್ಲ.ಪದವಿ ಕಾಲೇಜುಗಳ ಬಗ್ಗೆ ಹೇಳುವು ದಾದರೆ,ತರಗತಿ ನಡೆಯುವ ಕೋಣೆಗಳನ್ನು ನಿರಂತರವಾಗಿ ಸ್ಯಾನಿಟೈಸ್‌ ಮಾಡುತ್ತಿರಬೇಕು.ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡುತ್ತಲೇ ಇರಬೇಕು.ಪ್ರತಿಕ್ಷಣವೂ ಎಚ್ಚರ ತಪ್ಪುವಂತಿಲ್ಲ.ವಿದ್ಯಾರ್ಥಿಗಳು ಮತ್ತು ಬೋಧಕರು,ಮತ್ತಿತರೆ ಸಿಬ್ಬಂದಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ.ಮುಖ್ಯವಾಗಿ ವೈರಸ್‌ ನಮ್ಮ ನಡುವೆಯೇ ಜೀವಂತವಾಗಿ ಓಡಾಡಿಕೊಂಡಿದೆ.ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸು ತ್ತೇವೆ.ಈ ವಿಷಯದಲ್ಲಿ ಆತುರ ಸಲ್ಲ ಎಂದು ಅವರು ತಿಳಿಸಿದರು.

ಈಗಾಗಲೇ ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ.ಡಿಜಿಟಲ್‌ ಕಲಿಕೆ ಮತ್ತು ಬೋಧನೆ ನಿರೀಕ್ಷೆಗೂ ಮೀರಿ ಉತ್ತಮವಾಗಿ ನಡೆಯುತ್ತಿದೆ.ವಿದ್ಯಾರ್ಥಿಗಳು ಇದೇ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ತಯಾರಿ ಮಾಡಿಕೊಳ್ಳಬೇಕು ಎಂದ ಅವರು,ಈಗಾಗಲೇ ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ,ಮಾರ್ಗಸೂಚಿ ಬಂದಿದೆ.ಅದರನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ಶೀಘ್ರವೇ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕಾಲೇಜು ಆರಂಭದ ದಿನವನ್ನು ಪ್ರಕಟಿಸಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!