Bhagalpur

ಎನ್‌ಡಿಎ ಆರ್ಥಿಕತೆಯನ್ನು ನಾಶಗೊಳಿಸಿದೆ -ರಾಹುಲ್‌

ಭಾಗಲಪುರ, ಅ 23- ಬಿಜೆಪಿ ನೇತೃತ್ವದ ಎನ್‌ಡಿಎ ದೇಶದ ಆರ್ಥಿಕತೆಯನ್ನು ಸಂಪೂರ್ಣ ಹದಗೆಟ್ಟಿದ್ದು, ಬಿಹಾರದ 19 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವ ಭರವಸೆ ದಾರಿ ತಪ್ಪಿಸುವಂತಿದೆ ಎಂದು ಮಾಜಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಭಾಗಲಾಪುರ ಮತ್ತು ನಾವಡದಲ್ಲಿ ಮಹಾಮೈತ್ರಿ ಅಭ್ಯರ್ಥಿಗಳ ಪರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತು ಬಿಹಾರದ ನಿತೀಶ್‌ ಕುಮಾರ್‌ ಸರ್ಕಾರ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿದ್ದು, ಯುವಕರಿಗೆ ಉದ್ಯೋಗ ಒದಗಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದರು.

2014ರ ಲೋಕಸಭಾ ಚುನಾವಣೆಗಳಲ್ಲಿ ಮೋದಿ ಭರವಸೆ ನೀಡಿದಂತೆ 2 ಕೋಟಿ ಯುವಕರಿಗೆ ಉದ್ಯೋಗ ದೊರೆತಿದೆಯೇ ಎಂಬುದರ ಕುರಿತು ಅವರನ್ನು ಪ್ರಶ್ನಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ನಿತೀಶ‌ ಕುಮಾರ‌ ದೇಶಕ್ಕೆ ಏನು ಮಾಡಿಲ್ಲ. ಈಗ ಎನ್‌ಡಿಎ 19 ಲಕ್ಷ ಉದ್ಯೋಗ ಒದಗಿಸುವ ಭರವಸೆ ನೀಡುತ್ತಿದೆ. ಹಾಗಿದ್ದಲ್ಲಿ ಇಲ್ಲಿಯವರೆಗೆ ಅವರೇನು ಮಾಡುತ್ತಿದ್ದರು ಎಂದು ಮತದಾರರು ಪ್ರಶ್ನಿಸಬೇಕು ಎಂದರು.

ಮೋದಿ ಅವರು ಸೀಮಿತ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ರೈತರು, ಯುವಕರು, ಬಡವರು ಮತ್ತು ಸಾರ್ವಜನಿಕರ ಬಗ್ಗೆ ಕಾಳಜಿಯಿಲ್ಲ. ಕೇವಲ ಮುಖೇಶ‌ ಅಂಬಾನಿ ಮತ್ತು ಅದಾನಿ ಬಗ್ಗೆ
ಮಾತ್ರ ಕಾಳಜಿಯಿದೆ ಎಂದು ಆರೋಪಿಸಿದರು.
ವಿಮಾನನಿಲ್ದಾಣಗಳು, ರೈಲ್ವೆ ಹಳಿಗಳು ಮತ್ತು ಇತರ ಸಾರ್ವಜನಿಕ ಸೌಲಭ್ಯಗಳನ್ನು ಅಂಬಾನಿ ಮತ್ತು ಅದಾನಿಗೆ ಮಾರಾಟ ಮಾಡಲಾಗುವುದು ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

Back to top button
error: Content is protected !!