Kalaburagi

ಕೇಂದ್ರ ಸರ್ಕಾರ 50 ಸಾವಿರ ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಿಸಬೇಕು -ವಾಟಾಳ

ಕಲಬುರಗಿ, ಅ.27- ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದ್ದು, ನೆರೆ ಹಾವಳಿ ಪರಿಹಾರವಾಗಿ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕನ್ನಡ ಪರ ಹೋರಾಟಗಾರ, ವಾಟಾಳ ಪಕ್ಷದ ಸಂಸ್ಥಾಪಕ ಅಧ್ಯಕ್ಷ ವಾಟಾಳ ನಾಗರಾಜ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ವಾಟಾಳ ನಾಗರಾಜ ಅವರು ಪ್ರತಿಭಟನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ದೇಶದಲ್ಲಿ ಕರ್ನಾಟಕವಿದೆ ಎಂಬುದು ಪ್ರಧಾನಿ ನರೇಂದ್ರ ಅವರಿಗೆ ತಿಳಿದಿಲ್ಲ. ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಪ್ರವಾಹಕ್ಕೆ ನಯಾಪೈಸೆಯೂ ನೀಡಿಲ್ಲ ಎಂದು ಆರೋಪಿಸಿದರು.

ಬಿಜೆಪಿಯ 25 ಸಂಸದರು, ಕೇಂದ್ರ ಸಚಿವರು ನಿಷ್ಪ್ರಯೋಜಕರಾಗಿದ್ದಾರೆ ಎಂದು ಆರೋಪಿಸಿದ ಅವರು, ನೆರೆ ಹಾವಳಿಯಿಂದಾದ ಹಾನಿಯನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಬಂದು ವೀಕ್ಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರವಾಹ ಪೀಡಿತ ಜನರ ಪರಿಸ್ಥಿತಿ ನೋಡಿದರೆ ಕಣ್ಣೀರು ಬರುತ್ತಿದೆ . ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರು ಬೀದಿಯಲ್ಲಿ ಬಂದು ವಾಸಿಸುವ ಪರಿಸ್ಥಿತಿ ಎದುರಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿದ ವೈಮಾನಿಕ ಸಮೀಕ್ಷೆಯಿಂದ ಏನೂ ಪ್ರಯೋಜನವಾಗಿಲ್ಲ. ಅವರು ಕೇವಲ ಹೆಲಿಕಾಪ್ಟರ್ ಕಿಂಡಿಯಲ್ಲಿ ನೋಡಿ ಹೋಗಿದ್ದಾರಷ್ಟೇ ಎಂದು ಕಿಡಿಕಾರಿದರು.

ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು ತಕ್ಷಣವೇ ನೆರೆ ಸಂತ್ರಸ್ತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಬೇಕು ಎಂದು ಅವರು ಒತ್ತಾಯಿಸಿದರು.

ವಾಟಾಳ ನಾಗರಾಜ‌ ಅವರಿಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದವು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!