Kalaburagi

ಡಿ.ವಿ.ಸದಾನಂದಗೌಡ ಅವರ ಹೇಳಿಕೆ‌ ನಾಚಿಕೆಗೇಡಿನದ್ದು: ಪ್ರಿಯಾಂಕ ಖರ್ಗೆ

ಕಲಬುರಗಿ, ಅ.28- ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ‌ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಮುಖಂಡ ಮಾರುತಿ ಮಾನ್ಪಡೆ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂಬ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆ ವಿಚಾರವಾಗಿ ಟ್ವಿಟ್ ಮೂಲಕ ಶಾಸಕರು ಅಸಮಧಾನ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ಧ ಮಾನ್ಪಡೆ ಅವರು ಹೋರಾಡುತ್ತಲೇ ಬಂದಿದ್ದರು.

” ಕೊರೊನಾ‌ದಂತಹ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರ್ಕಾರ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ, ಈಗ ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ‌ ಸರ್ಕಾರ‌ ಕೊಡುಗೆ ಏನು ? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡ ಅವರನ್ನು ಪ್ರಿಯಾಂಕ ಕುಟುಕಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!