Entertainment

‘ಕಸ್ತೂರಿ ಮಹಲ್’ ಚಿತ್ರೀಕರಣ ಮುಕ್ತಾಯ

ಬೆಂಗಳೂರು, ಅ 28- ಖ್ಯಾತ ನಿರ್ದೇಶಕ ದಿನೇಶ ಬಾಬು ನಿರ್ದೇಶನದ ‘ಕಸ್ತೂರಿ ಮಹಲ್’ ಚಿತ್ರೀಕರಣ ಮುಕ್ತಾಯಗೊಂಡಿದೆ.

ಈ ತಿಂಗಳ ಆರಂಭದಲ್ಲಿ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ಆರಂಭವಾಗಿತ್ತು.

ಆಯುಧ ಪೂಜೆಯ ಶುಭದಿನದಂದು ಅದೇ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಗಿದೆ. ಸುಮಾರು 20 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯಗೊಂಡಿದೆ.
ಚಿತ್ರೀಕರಣ ನಂತರದ ಚಟುವಟಿಕೆ ಸದ್ಯದಲ್ಲೇ ಆರಂಭವಾಗಲಿದೆ.

ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ, ರಂಗಾಯಣ ರಘು, ಶೃತಿ ಪ್ರಕಾಶ, ನೀನಾಸಂ ಅಶ್ವಥ, ಅಕ್ಷರ ಮುಂತಾದವರಿದ್ದಾರೆ.
ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ ಆರ್ ಸಿ ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ ಆರ್ ಸಿ ಹಾಗೂ
ಅಕ್ಷಯ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನವಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!