Bengaluru

ರಾಜ್ಯದಲ್ಲಿ ಶುರುವಾಗಲಿದೆ ಹಿಂಗಾರು ಮಳೆ ಅಬ್ಬರ …!!

ಬೆಂಗಳೂರು, ಅ, 29- ದೇಶದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಅರ್ಭಟ, ಮುಗಿದರೂ ನವೆಂಬರ್ 1 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಈಶಾನ್ಯ ಮಾರುತಗಳ ಕಾರಣ ಹಿಂಗಾರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೆ ಭಾರೀ ಮಳೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಬಾರಿಯ ಹಿಂಗಾರು ಮಳೆ ತಡವಾಗಿ ಅಂದರೆ ಅಕ್ಟೋಬರ್ 28 ರಿಂದ ಆರಂಭವಾಗಿದೆ. ಮುಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೀಗ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲೇ ಹೆಚ್ಚು ಪ್ರಭಾವ ಬೀರುವ ಹಿಂಗಾರು ಮಳೆ ನಿನ್ನೆಯಿಂದ ಆರಂಭವಾಗಿದೆ.

ನವೆಂಬರ್ 1 ರ ಹೊತ್ತಿಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!