Bengaluru

ರಾಜ್ಯದಲ್ಲಿ ಒಟ್ಟು ಕೊರೋನಾ ಸಂಖ್ಯೆ 8,16.809

ಬೆಂಗಳೂರು, ಅ 28- ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

ಒಂದೇ ದಿನ 7 ಸಾವಿರದ 661 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 7 ಲಕ್ಷದ 41 ಸಾವಿರದ 219 ಸೋಂಕಿತರು ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 64 ಸಾವಿರದ 480 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 935 ಮಂದಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಒಂದೇ ದಿನ 45 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸತ್ತವರ ಸಂಖ್ಯೆ 11 ಸಾವಿರದ 91ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 2 ಸಾವಿರದ 175 ಸೋಂಕು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3 ಲಕ್ಷದ 33 ಸಾವಿರದ 37ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಒಂದೇ ದಿನ 4 ಸಾವಿರದ 378 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ 2 ಲಕ್ಷದ 87 ಸಾವಿರದ 678 ಮಂದಿ ಚೇತರಿಸಿಕೊಂಡಿದ್ದಾರೆ. 41 ಸಾವಿರದ 538 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸತ್ತವರ ಸಂಖ್ಯೆ 3 ಸಾವಿರದ 820ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ 19, ಬಳ್ಳಾರಿ 74, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 81, ಬೀದರ್ 11, ಚಿಕ್ಕಮಗಳೂರು 38, ಚಿತ್ರದುರ್ಗ 41, ದಕ್ಷಿಣ ಕನ್ನಡ 96, ದಾವಣಗೆರೆ 94, ಧಾರವಾಡ 76, ಗದಗ 12, ಹಾಸನ 114, ಹಾವೇರಿ 54, ಕಲಬುರಗಿ 35, ಕೊಡಗು 13, ಕೋಲಾರ 28, ಕೊಪ್ಪಳ 25, ಮಂಡ್ಯ 115, ಮೈಸೂರು 204, ರಾಯಚೂರು 20, ರಾಮನಗರ 48, ಶಿವಮೊಗ್ಗ 127, ತುಮಕೂರು 136, ಉಡುಪಿ 66, ಉತ್ತರ ಕನ್ನಡ 99, ವಿಜಯಪುರ 71 ಹಾಗೂ ಯಾದಗಿರಿಯಲ್ಲಿ 29 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!