Bengaluru

ಸುಳ್ಳು ಹೇಳುವುದರಲ್ಲಿ ಮೋದಿಯನ್ನು ಮೀರಿಸಲು ಯಾರಿಗೂ ಸಾಧ್ಯವಿಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು, ಅ.30- ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾವು ಟೀ ಮಾರಿಕೊಂಡು ಬದುಕಿದ್ದೆ ಎಂದು ಹೇಳುವ ಪ್ರಧಾನಿ ಮೋದಿ ದಿನಕ್ಕೆ ನಾಲ್ಕು ಬಾರಿ ಬಟ್ಟೆ ಬದಲಾಯಿಸುತ್ತಾರೆ. 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಜನತೆಗೆ ಹಲವಾರು ಭರವಸೆ ನೀಡಿದ್ದರು. ಆದರೆ, ಒಂದೂ ಭರವಸೆ ಈಡೇರಿಸಲಿಲ್ಲ. ಪ್ರಧಾನಿ ಮೋದಿ ದೊಡ್ಡ ಉದ್ಯಮಿಗಳ ಪರವಾಗಿದ್ದಾರೆ. ಬಡವರು ಮತ್ತು ಕಾರ್ಮಿಕರ ಪರವಾಗಿ ಮೋದಿಗೆ ಯಾವುದೇ ಕಾಳಜಿ ಇಲ್ಲ. ಈಗ ರೈತರು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!