New Delhi

ಬಾಬ್ರಿ ಮಸೀದಿ ಧ್ವಂಸ ತೀರ್ಪು ನೀಡಿದ ನ್ಯಾಯಾಧೀಶರಿಗೆ ಭದ್ರತೆ ವಿಸ್ತರಿಸಲು ಸುಪ್ರೀಮ ಕೋಟ೯ ನಕಾರ

ನವದೆಹಲಿ, ನ 2 – ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ್ದ ಪ್ರಕರಣದಲ್ಲಿ ತೀರ್ಪು ನೀಡಿದ್ದ ಲಖನೌ ಸಿಬಿಐ ವಿಶೇಷ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎಸ್.ಕೆ. ಯಾದವ ಅವರಿಗೆ ಭದ್ರತೆ ವಿಸ್ತರಿಸಲು ಸುಪ್ರೀಮ ಕೋರ್ಟ್ ನಿರಾಕರಿಸಿದೆ.

ಸೇವಾ ನಿವೃತ್ತಿಯ ದಿನದಂದೇ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಧೀಶ ಯಾದವ, ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ ಹಾಗೂ ಉಮಾ ಭಾರತಿ ಸೇರಿದಂತೆ 32 ಮಂದಿಯನ್ನು ದೋಷಾರೋಪದಿಂದ ಮುಕ್ತಗೊಳಿಸಿ ಖುಲಾಸೆಗೊಳಿಸಿದ್ದರು.

ಆದರೆ, ಈ ಪ್ರಕರಣ ಅತ್ಯಂತ ಸೂಕ್ಷ್ಮವಾಗಿರುವ ಕಾರಣ ತಮ್ಮ ವೈಯಕ್ತಿಕ ಭದ್ರತೆಯನ್ನು ಮುಂದುವರಿಸಬೇಕು ಎಂದು ನ್ಯಾಯಾಧೀಶ ಯಾದವ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಈ ಕುರಿತು ನ್ಯಾಯಮೂರ್ತಿ ಆರ್.ಎಫ್.ನಾರಿಮನ್, ನ್ಯಾಯಮೂರ್ತಿ ನವೀನ್ ಸಿನ್ಹಾ ಹಾಗೂ ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿ “ಕೇವಲ ಒಂದು ಪತ್ರದ ಆಧಾರದ ಮೇಲೆ ಭದ್ರತೆ ಕಲ್ಪಿಸುವುದು ಸೂಕ್ತವಲ್ಲ” ಎಂದು ಪೀಠ ಭದ್ರತೆ ವಿಸ್ತರಿಸಲು ನಿರಾಕರಿಸಿದೆ.

ಕಳೆದ ಸೆಪ್ಟೆಂಬರ್ 30 ರಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ, ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ಹಿಂದೆ ಪಿತೂರಿ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿತ್ತು. ಅದರಲ್ಲಿ ಒಟ್ಟು 32 ಮಂದಿಯನ್ನು ಖುಲಾಸೆಗೊಳಿಸಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!