Bengaluru

ಚುನಾವಣೆಯಲ್ಲಿ ಸೆಟ್ ಅಪ್ ಬಾಕ್ಸ್ ಹಂಚಿಕೆ, ನಕಲಿ ಮತ ಕಾಡ೯ ಸೃಷ್ಟಿ, ಹಣ ಹಂಚಿಕೆ : ಡಿ.ಕೆ ಶಿವಕುಮಾರ

ಬೆಂಗಳೂರು,ನ 02- ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅವರನ್ನು ವೆಚ್ಚ ಮಿತಿ ದಾಟಿ ಸೆಟ್ ಅಪ್ ಬಾಕ್ಸ್ ವಿತರಣೆ,ನಕಲಿ ಮತದಾರರ ಸೃಷ್ಟಿ,ಅಕ್ರಮ ಹಣ ಹಂಚಿಕೆ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಕಣದಿಂದ ತಕ್ಷಣ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು,ರಾಜರಾಜೇಶ್ವರಿ ಚುನಾವಣಾ ಕ್ಷೇತ್ರದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಅದನ್ನು ಎಲ್ಲರೂ ನೋಡಿ ದ್ದಾರೆ. ನಾವು ಕೂಡ ಸರ್ಕಾರ, ಚುನಾವಣಾ ಆಯೋಗ, ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೇವೆ. ಬಿಜೆಪಿ ಅಭ್ಯ ರ್ಥಿ ಮುನಿರತ್ನಂ ನಾಯ್ಡು ಅವರು ಮಾಧ್ಯಮಗಳ ಜತೆ ಮಾತನಾಡುವಾಗ 34 ಸಾವಿರ ಸೆಟ್ ಅಪ್ ಬಾಕ್ಸ್ ಹಂಚಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುವುದಾಗಿ ಹೇಳಿದೆ. ನಾವು 50 ಸಾವಿರ ಸೆಟ್ ಟಾಪ್ ಬಾಕ್ಸ್ ಅಂತಾ ಹೇಳಿದ್ದೆವು. ಆದರೆ 34 ಸಾವಿರ ಕೊಟ್ಟಿದ್ದೇನೆ ಅಂತಾ ಬಿಜೆಪಿ ಅಭ್ಯರ್ಥಿ ಒಪ್ಪಿಕೊಂಡಿದ್ದಾರೆ.34 ಸಾವಿರ ಸೆಟ್ ಟಾಪ್ ಬಾಕ್ಸ್ ಗೆ ತಲಾ ಸಾವಿರದಂತೆ ಅಂದಾಜು 3.40 ಕೋಟಿ ರೂಪಾಯಿ ಆಗುತ್ತದೆ. ಇದನ್ನು ಉಚಿತವಾಗಿ ಹಂಚಿದ್ದಾರೆ.ಕನೆಕ್ಷಬ್ ಒಂದು ತಿಂಗಳ ಶುಲ್ಕ 150 ರೂ. ಫ್ರೀ ಕೊಟ್ಟರೂ ಹೆಚ್ಚುವರಿ 51ಲಕ್ಷ ರೂಪಾಯಿ ಆಗುತ್ತದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!