Karwar

ಸೇತುವೆ ಮೇಲಿಂದ ಆಳಕ್ಕೆ ಬಿದ್ದ ಕಾರು: 2 ಸಾವು

ಕಾರವಾರ, ನ.3- ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ (28) ಹಾಗೂ ರಾಕೇಶ ಸಿ.ಆರ್ (28) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!