Bengaluru

ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು, ನ 4- ರಾಜ್ಯದಲ್ಲಿ ಭಾರಿ ಗೊಂದಲ ಸೃಷ್ಟಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭಗೊಳ್ಳಲಿದೆ.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದ ನಂತರ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ‌ಕುಮಾರ‌ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಾರಂಭಕ್ಕೂ ಮುನ್ನ, ಅರ್ಹ ಉಪನ್ಯಾಸಕರಿಗೆ ಪ್ರಾಚಾರ್ಯ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!