Bengaluru

ಚಳಿಗಾಲ ಮತ್ತು ಹಬ್ಬಕ್ಕೆ ಕೋವಿಡ್ ನಿರ್ಬಂಧಗಳಲ್ಲಿ ಸಡಿಲಿಕೆ ಇಲ್ಲ

ಬೆಂಗಳೂರು,ನ 04- ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.ಇದು ಸಮಾಧಾನಕರ ಸಂಗತಿ.ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಅವರು ವಿಡಿಯೋ ಸಂವಾದ ನಡೆಸಿದರು.
ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತಾರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್ ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿ ನ್ ವಿಷಯದಲ್ಲಿ ಈಗಾಗಲೇ ಕೆಲ ಸೂಚನೆ ನೀಡಲಾಗಿದೆ.ಆ ಬಗ್ಗೆಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿ ಸಿದ ಸಚಿವ ಸುಧಾಕರ್ ಅವರು,ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞ ತೆ ಗಳನ್ನು ತಿಳಿಸಿದರು. ಲಾಕ್ಡೌನ್ ಗೆ ಮುಂಚೆ ಉತ್ತಮವಾಗಿ ನಿಯಂತ್ರಣದಲ್ಲಿದ್ದ ಕೋವಿಡ್ ಬಳಿಕ ಅಂತಾರಾಷ್ಟ್ರೀಯ ಮತ್ತು ಅಂತಾ ರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು. ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಟೆಸ್ಟ್ ಸಂಖ್ಯೆ ಹೆಚ್ಚಳದ ಮೂಲಕ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣದ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ. ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆಯಿಂದ ಮುಂದುವರಿಯಲಾಗುವುದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸ ಲಾಗುತ್ತಿದೆ ಎಂದರು.
ನಾನಾ ಪ್ರತಿಷ್ಠಿತ ಸಂಸ್ಥೆ ಗಳ ಸಹಯೋಗದಲ್ಲಿ ನಡೆಸಿರುವ ಸಿರೋ ಸಮೀಕ್ಷೆ ಕೂಡ ನಮಗೆ ಮುಂದೆ ಅಳವಡಿಸಿಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೇ ದಿನ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ದಸರಾ ಮಹೋತ್ಸವ ಸಂದರ್ಭದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಮುಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೂಡ ನಿರ್ಬಂಧಗಳನ್ನು ಸಡಿಲಿಸುವುದಿಲ್ಲ. ರಾಜ್ಯದಲ್ಲಿರುವ ಕೇಂದ್ರದ ಕೆಲ ಲ್ಯಾಬ್ ಗಳಲ್ಲಿ ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡಬೇಕು, ಆರ್ ಟಿಪಿಸಿ ಆರ್ ಕಿಟ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಬೇಕು ಮತ್ತು ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ಕೇಂ ದ್ರ ಸರ್ಕಾರ ನೆರವು ನೀಡಬೇಕು.ಕೇಂದ್ರ ಸಚಿವರು ಕೆಲ ಜಿಲ್ಲೆಗಳ ಅಧಿಕಾರಿಗಳ ಜತೆ ಸಂವಾದ ನಡೆಸಿದರು. ಆರೋಗ್ಯ ಇಲಾಖೆ ಆಯುಕ್ತ ಪಂಕಜ ಕುಮಾರ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರದಾನ ಕಾರ್ಯದರ್ಶಿ ಅನಿಲ ಕುಮಾರ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!