Bengaluru

ವಿದ್ಯುತ್ ದರ ಹೆಚ್ಚಳ ಸಮಂಜಸವಲ್ಲ: ಕುಮಾರಸ್ವಾಮಿ

ಬೆಂಗಳೂರು, ನ 5- ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಬಡ ಜನತೆಯ ಪಾಲಿಗೆ ವಿದ್ಯುತ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು,ಸರ್ಕಾರ ಬಡವರ ಕಷ್ಟದ ಬಗ್ಗೆ ಅಲೋಚನೆ ಮಾಡಬೇಕು ಎಲ್ಲದಕ್ಕೂ ದರ ಏರಿಕೆಯೊಂದೇ ಪರಿಹಾರ ವಲ್ಲ , ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದೂ ಒತ್ತಾಯಿಸಿದ್ದಾರೆ.

ಅಲ್ಲದೇ ವಿದ್ಯುತ್ ದರ ಏರಿಕೆಯನ್ನು ಮುಂದೂಡಬೇಕು. ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಸದ್ಯದ ಪರಿಸ್ಥಿತಿಯ ಪ್ರಕಾರ ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಮುಂದೂಡಬೇಕು ಎಂದೂ ಆಗ್ರಹಿಸಿದ್ದಾರೆ.

ಕೊರೋನಾ ಸೋಂಕು, ನೆರೆ ಹಾವಳಿ, ಇನ್ನತರೆ ಸಮಸ್ಯೆಗಳಿಂದ ಜನತೆ ಬಹಳ ಕಷ್ಟದಲ್ಲಿ ಜೀವನ ಮಾಡುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಠಿಣ ತೀರ್ಮಾನ ಸಾಧುವಲ್ಲ, ಸಮಂಜಸವೂ ಅಲ್ಲ ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!