New Delhi

24 ಗಂಟೆಗಳಲ್ಲಿ 50,210 ಕೊರೋನಾ ಪ್ರಕರಣ

ನವದೆಹಲಿ, ನ 5- ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಹರಡುವಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 50,210 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 704 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 83,64,086ಕ್ಕೆ ತಲುಪಿವೆ. ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ, ಚೇತರಿಸಿಕೊಳ್ಳುತ್ತಿರುವರ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 55,331 ಮಂದಿ ಸೋಂಕಿತರು ಗುಣಮುಖಹೊಂದಿದ್ದಾರೆ. ಪ್ರಸ್ತುತ 5,33,787 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 76,11,809 ಮಂದಿ ಚೇತರಿಸಿಕೊಂಡು ಬಿಡುಗಡೆ ಹೊಂದಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಇನ್ನೂ ಕೊರೊನಾ ವೈರಸ್ ಸೋಂಕಿನಿಂದ ದೇಶದಲ್ಲಿ ಈವರೆಗೆ ಒಟ್ಟು 1,24,315 ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಹೆಚ್ಚಳಗೊಂಡಿದೆ. ದೇಶದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಶೇ 92.20 ರಷ್ಟಿದ್ದು, ಒಟ್ಟು ಪ್ರಕರಣಗಳಲ್ಲಿ ಕೇವಲ 6.318 ರಷ್ಟು ಮಾತ್ರ ಸಕ್ರಿಯ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಸೋಂಕಿನಿಂದ ಸಾವಿನ ಪ್ರಮಾಣ ಶೇ 1.49 ರಷ್ಟು ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!