Mumbai

ಅರ್ನಬ್ ಗೋಸ್ವಾಮಿ 14 ದಿನಗಳ ಕಾಲ ಜ್ಯುಡಿಷಿಯಲ್ ಕಸ್ಟಡಿಗೆ

ಮುಂಬೈ, ನ 5- ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಎರಡು ವಾರಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ನಿನ್ನೆ ರಾಯಗಡ ಪೊಲೀಸರು ಮುಂಬೈ ಪೊಲೀಸರ ನೆರವಿನೊಂದಿಗೆ ಗೋಸ್ವಾಮಿ ನಿವಾಸದಲ್ಲಿ ನಾಟಕೀಯ ಬೆಳವಣಿಗೆಗಳ ನಡುವೆ ಬಂಧಿಸಿದ್ದರು. 2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್, ಆತನ ತಾಯಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಮೇಲೆ ಅರ್ನಬ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ತಮ್ಮ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸುವ ಜತೆಗೆ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಅರ್ನಬ್ ಬಂಧಿಸಿದ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಂಧನವನ್ನು ಖಂಡಿಸಿದ್ದರು. ಮಹಾರಾಷ್ಟ್ರ ರಾಜ್ಯ ಸರ್ಕಾರ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು.

ಅರ್ನಬ್ ಬಂಧನ ತುರ್ತು ಪರಿಸ್ಥಿತಿಯ ಆ ದಿನಗಳು ನೆನಪಿಗೆ ಬರುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೂ ಪಾಲ್ಘರ್ ಗುಂಪು ಹಲ್ಲೆ ಘಟನೆ, ಬಾಂದ್ರಾ ರೈಲ್ವೆ ನಿಲ್ದಾಣದ ಬಳಿ ಜನ ಸಮೂಹ ಸೇರಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ಎನ್ ಎಮ್ ಜೋಷಿ ಮಾರ್ಗ್ ಪೊಲೀಸ್ ಠಾಣೆ, ಪೈಥೋನಿ ಪೊಲೀಸ್ ಠಾಣೆಗಳಲ್ಲೂ ಗೋಸ್ವಾಮಿ ವಿರುದ್ದ ಹಲವು ಪ್ರಕರಣಗಳು ದಾಖಲಾಗಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!