Dharwad

ಮಾಜಿ ಸಚಿವ ಕುಲಕರ್ಣಿ ಹಿಂಡಲಗಾ ಜೈಲಿಗೆ ಶಿಫ್ಟ್

ಧಾರವಾಡ : ಇಂದು ಮುಂಜಾನೆ ಸಿಬಿಐ ದಿಂದ ಬಂಧಿಸಲ್ಪಟ್ಟಿದ್ದ ಕಾಂಗ್ರೆಸ್ ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲ್ ಗೆ ಸ್ಥಳಾಂತರಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ನ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿಸಲ್ಪಟ್ಟಿರುವ ಕುಲಕರ್ಣಿ ಅವರನ್ನು ಧಾರವಾಡ ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಕೋವಿಡ್ ಹಿನ್ನಲೆಯಲ್ಲಿ ನ್ಯಾಯಾಲಯ ಕುಲಕರ್ಣಿ ಅವರನ್ನು ಜೈಲ್ ನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಮಾಡಲಿದೆ. ಧಾರವಾಡ ಜೈಲ್ ನಲ್ಲಿ ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಂಧಿಗಳಾಗಿರುವದರಿಂದ ಕುಲಕರ್ಣಿ ಅವರನ್ನು ಬೆಳಗಾವಿಗೆ ಶಿಫ್ಟ್ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!