Bengaluru

ರಾಜ್ಯದಲ್ಲಿ ಪಟಾಕಿ ನಿಷೇಧ

ಬೆಂಗಳೂರು,ನ 06- ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧ ಮಾಡಲಾಗುವುದು.ಈ ಸಂಬಂಧ ಶೀಘ್ರದಲ್ಲಿಯೇ ಸರ್ಕಾರ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಹಿನ್ನಲೆಯಲ್ಲಿ ಪಟಾಕಿ ಮಾರಾಟ ಹಾಗೂ ಸಾಗಾಣಿಕೆ, ದಾಸ್ತಾನು ಪಟಾಕಿ ಹಚ್ಚುವುದಕ್ಕೂ ಅವಕಾಶ ನೀಡುವುದಿಲ್ಲ. ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಎಲ್ಲಾ ಜಿಲ್ಲಾಡಳಿತಕ್ಕೂ ಸದ್ಯದಲ್ಲಿಯೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ತಿಳಿಸಿದರು.

ಪಟಾಕಿ ನಿಷೇಧದ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಚೆರ್ಚೆ ನಡೆಸಲಾಗಿದೆ. ಪರಿಸರ ಮತ್ತು ಹವಾಮಾನ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂಬಂಧ ಸೂಕ್ತ ತೀರ್ಮಾನಗಳನ್ನು ಕೈಗೊಂಡು ಸರ್ಕಾರಕ್ಕೆ ಸಲಹೆ ಸೂಚನೆ ನೀಡಿದ್ದಾರೆ ಎಂದು ಅವರು ವಿವರಿಸಿದರು.

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ಹಾಗೂ ಉಪ ಚುನಾವಣೆಯ ಎರಡೂ ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದೇವೆ. ಅಧಿಕೃತ ಘೋಷಣೆ ಬಾಕಿ ಇದೆ.ನಾನು ಹೇಳಿದ ಮಾತುಗಳಿಗೆ ಸಾಕಷ್ಟ ಮಾಹಿತಿ, ದಾಖಲೆ ಹಿನ್ನಲೆಯಲ್ಲಿ ಮಾತನಾಡುತ್ತೇನೆ. ತಾವು ಹೇಳಿದ್ದು ಎಂದೂ ಸುಳ್ಳಾಗಿಲ್ಲವೆಂದು ಇದೇ ವೇಳೆ ಮುಖ್ಯಮಂತ್ರಿ ಹೇಳಿದರು.

ನವೆಂಬರ್ 10ರ ಫಲಿತಾಂಶವನ್ನು ನೋಡಿಕೊಂಡು ದೆಹಲಿಗೆ ತೆರಳುತ್ತೇನೆ. ನ 11ರಂದು ಹೈಕಮಾಂಡ್ ಸಮ ಯಾವಕಾಶ ಪಡೆದು ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಪಡೆಯಲಿದ್ದೇನೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಲವ್ ಜಿಹಾದ್ ನಿಷೇಧದ ಬಗ್ಗೆ ಹಾಗೂ ಕಾನೂನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಉತ್ತರ ಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ಕಾನೂನುಗಳನ್ನು ಪರಿಶೀಲಿಸಿ ರಾಜ್ಯದಲ್ಲಿಯೂ ಲವ್ ಜಿಹಾದ್ ಕಾಯ್ದೆ ಜಾರಿಗೆ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!