Vijayapur

ಮತ್ತೆ ಐವರ ಬಂಧನ; ಎಸ್.ಪಿ.

ವಿಜಯಪುರ, ನ.7- ಭೀಮಾತೀರದ ರೌಡಿ ಶೀಟರ್ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಅತಾಲಟ್ಟಿ ಗ್ರಾಮದ ಯಾಶೀನ ರಮಜಾನಸಾಬ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಉರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಎಂಬುವವರನ್ನು ಬಂಧಿಸಲಾಗಿದೆ ಎಂದರು.

ಬಂಧಿತರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದರು.

ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಎಎಸ್ ಪಿ ಡಾ.ರಾಮ ಅರಸಿದ್ದಿ, ಡಿವೈಎಸ್ ಪಿ ಲಕ್ಷ್ಮಿನಾರಾಯಣ, ಸಿಪಿಐಗಳಾದ ಎಂ.ಕೆ. ದ್ಯಾಮಣ್ಣವರ, ರವೀಂದ್ರ‌ ನಾಯ್ಕೋಡಿ, ಸುನೀಲ ಕಾಂಬಳೆ, ಸುರೇಶ ಬಂಡೆಗುಂಬಳ, ಬಸವರಾಜ ಮೂಕರ್ತಿಹಾಳ ಹಾಗೂ ಪಿಎಸ್ ಐ ತಂಡಕ್ಕೆ ಎಸ್ ಪಿ ಶ್ಲಾಘನೆ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!