Bengaluru

ಸಂಪುಟ ಪುನಾರಚನೆ ತೀಮಾ೯ನ ಶೀಘ್ರ -ಯಡಿಯೂರಪ್ಪ

ಬೆಂಗಳೂರು,ನ 10- ಪಕ್ಷದ ರಾಷ್ಟ್ರೀಯ ವರಿಷ್ಟರ ಅನುಮತಿ ಪಡೆದು ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಉಪ ಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ದೊಡ್ಡಮಟ್ಟದ ಬದಲಾವಣೆಗೆ ಚಿಂತನೆ ನಡೆಸಿದ್ದೇವೆ.ಕೆಲವರನ್ನು ಸಂಪುಟದಿಂದ ಕೈಬಿ ಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಒಂದೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಭೇಟಿ ಮಾಡಿ ಚೆರ್ಚೆ ನಡೆಸುತ್ತೇನೆ.ಅದೇ ರೀತಿ ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಪಕ್ಷದ ವರಿಷ್ಠರ ಜೊತೆ ಚೆರ್ಚೆ ನಡೆಸಲಿದ್ದೇನೆ ಎಂದು ಹೇಳುವ ಮೂಲಕ ಸಂಪುಟ ಪುನಾರಚನೆ ಖಚಿತವೆಂದು ಸಂದೇಶ ರವಾನಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಜನಪರ ಅಭಿವೃದ್ದಿ ಪರ ರೈತ ಪರ ಸರ್ಕಾರಕ್ಕೆ ಜನತೆ ಆಶೀ ರ್ವಾದ ಮಾಡಿದ್ದಾರೆ ಎಂದು ಭಾವಿಸಿದ್ದೇನೆ. ಉಪ ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿ ಸುತ್ತೇವೆ. ಆರ್ ಆರ್ ನಗರದಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವುದಾಗಿ ವಿಶ್ವಾಸವಿತ್ತು. ಅದರಂತೆ 50 ಸಾವಿರ ಮತಗಳ ಅಂತರದಿಂದ ಹಾಗೂ ಶಿರಾದಲ್ಲಿ 15ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೇವೆ ಎಂದು ಅವರು ಸಂತಷ ಹಂಚಿಕೊಂಡರು.

ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಸವ ಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ತೀರ್ಮಾನಿಸಲಾಗಿದೆ. ವಿಜಯೇಂದ್ರ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಲ್ಲ ಎಂದು ಅವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!