Bengaluru

ಮಾನವ ಕಳ್ಳ ಸಾಗಾಣಿಕೆ ನಿಷೇಧ,ಮಹಿಳಾ ಸುರಕ್ಷತೆ ಸರ್ಕಾರದ ಆದ್ಯತೆ : ಮುಖ್ಯಮಂತ್ರಿ

ಬೆಂಗಳೂರು,ನ 11(ಯುಎನ್ಐ)ಮಾನವ ಕಳ್ಳ ಸಾಗಾಣಿಕೆ ನಿಷೇದ ದಳಕ್ಕೆ ನಿರ್ಭಯ ಯೋಜನೆ ಯಡಿ 751 ದ್ವಿಚಕ್ರ ವಾಹನಗಳನ್ನು ನೀಡಲಾಗಿದೆ.ಮಹಿಳೆ ಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ.ಯೋಜನೆ ಅಡಿಯಲ್ಲಿ ಏಳು ಕೋಟಿ ರೂ.ಅನುದಾನ ನೀಡಲಾಗಿದೆ.ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ನಮ್ಮ ಸರ್ಕಾರ ಆದ್ಯತೆಯಾಗಿದೆ.ರಾಜ್ಯದಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡಲು, ಸುರಕ್ಷತೆಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗ ದಿಚಕ್ರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರು ಬಿಎಂಟಿಸಿ ಬಸ್ ನಲ್ಲಿ ಸುರಕ್ಷ ಕ್ರಮ,ಗಸ್ತು ವಾಹನ, ಲಿಂಗ ಸಂವೇದನೆ ತರಬೇತಿ ನೀಡಲಾಗಿದೆ. ಸೇಫ್ ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಹಿಳಾ ಸುರಕ್ಷತೆ ಹಾಗೂ ಅವರ ರಕ್ಷಣೆ ನೀಡುವಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರಿಗೆ ಎಲ್ಲಾ ರೀತಿಯ ಭದ್ರತೆ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ರಾಜ್ಯವನ್ನು ಡ್ರಗ್ಸ್​​ ಮುಕ್ತಗೊಳಿಸುವ ಸಲುವಾಗಿ ಡ್ರಗ್ಸ್ ವಿರುದ್ಧ ಸಮರ ಮುಂದುವರೆ ಸುತ್ತೇವೆ.ಡ್ರಗ್ಸ್​ ಜಾಲವನ್ನು ಬುಡ ಸಮೇತ ಕಿತ್ತು ಹಾಕಲು ಪೊಲೀಸ್ ಇಲಾಖೆ ಸರ್ಕಾರ ತೀರ್ಮಾನಿಸಿದೆ. ಇತ್ತೀಚೆಗೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿವೆ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಡ್ರಗ್ಸ್ ವಿರುದ್ಧದ ಸಮರ ಮುಂದುವರೆದಿದೆ. ಇದು ಎಂದಿಗೂ ನಿಲ್ಲುವುದಿಲ್ಲ.ಡ್ರಗ್ಸ್​ ಜಾಲವನ್ನು ಬುಡ ಸಮೇತ ಕಿತ್ತು ಹಾಕುವವರೆಗೂ ನಮ್ಮ ಕಾರ್ಯ ಮುಂದುವರಿಯುತ್ತದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಅವರು ಪೊಲೀಸ್ ಇಲಾಖೆಗೆ ಅಗತ್ಯವಿರುವ ಸಹಾಯವನ್ನೆಲ್ಲ ಮಾಡುತ್ತಿದ್ದಾರೆ. ಪೊಲೀಸರ ನೆರವಿಗೆ ನಮ್ಮ ಸರ್ಕಾರ ಎಂದಿಗೂ ಬದ್ಧವಾ ಗಿದೆ.ಸಂಚಾರ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿರುವುದು ಪೊಲೀಸರ ಜವಾಬ್ದಾರಿ,ಆ ಕಾರ್ಯವನ್ನು ಅವರು ನಿರ್ವಹಿಸುತ್ತಿ ದ್ದಾರೆ.ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಬಗ್ಗೆ ಹೆಚ್ಚಿನ‌ ನಿಗಾ ವಹಿಸಲಾಗುತ್ತಿದೆ. ಆರ್​​ಬಿಐ,ಫೇಸ್​​ಬುಕ್ ಸೇರಿದಂತೆ ಮತ್ತಿತರ ಸಾಮಾಜಿಕ ಜಾಲತಾಣಗಳ‌ ಸಿಇಒಗಳ ಜತೆ ಚೆರ್ಚೆ ನಡೆಸುತ್ತಿದ್ದು ಇನ್ನು ಹೆಚ್ಚಿನ ನಿಗಾವಹಿಸಿ ಅಹಿತಕರ ಪೋಸ್ಟ್​​ಗಳನ್ನು ತಡೆಯುವ ಪ್ರಯತ್ನ ನಡೆಸಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಡಿಜಿಪಿ ಪ್ರವೀಣ ಸೂದ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು. ಪೊಲೀಸ್ ಇಲಾಖೆಗೆ ನೀಡಿದ ಹೊಸ ದ್ವಿಚಕ್ರ ವಾಹನಗಳ ಬೀಗ ಕೈಯನ್ನು ಮುಖ್ಯಮಂತ್ರ ಡಿಜಿಪಿಗೆ ಹಸ್ತಾಂತರಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!