New Delhi

ಆನ್ ಲೈನ್ ಸುದ್ದಿ, ಕಂಟೆಂಟ್ ನಿಯಂತ್ರಿಸಲು ಕೇಂದ್ರದ ನಿಧಾ೯ರ

ನವದೆಹಲಿ, ನ 11- ಆನ್‌ಲೈನ್ ಸುದ್ದಿ ಜಾಲತಾಣಗಳ ಜೊತೆಗೆ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ , ಹಾಟ್‌ಸ್ಟಾರ್‌ ನಂತಹ ಆನ್‌ಲೈನ್ ಕಂಟೆಂಟ್ ಒದಗಿಸುವವರನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ವ್ಯಾಪ್ತಿಗೆ ಒಳಪಡಿಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೊಸದಾಗಿ ಪ್ರಕಟಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಗೆ ರಾಷ್ಟ್ರಪತಿ ಅಂಕಿತ ಹಾಕಿರುವ ಹಿನ್ನಲೆಯಲ್ಲಿ ಇಂದಿನಿಂದಲೇ ನಿರ್ದೇಶನಗಳು ಜಾರಿಗೆ ಬರಲಿದ್ದು, ಸಾಮಾಜಿಕ ಮಾಧ್ಯಮದ ವೇದಿಕೆಗಳಾದ ಫೇಸ್‌ಬುಕ್, ಟ್ವಿಟರ್ ಹಾಗೂ ಇನ್‌ಸ್ಟಾಗ್ರಾಮ್‌ ಸುದ್ದಿಗಳನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಪರಿಶೀಲಿಸಲಿದೆ.

ಆನ್‌ಲೈನ್ ಚಲನಚಿತ್ರಗಳು, ಆಡಿಯೊ ದೃಶ್ಯಗಳು, ಸುದ್ದಿ ಹಾಗೂ ಸಮಕಾಲೀನ ಸಮಸ್ಯೆಗಳ ವಿಷಯಗಳು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಡಿಜಿಟಲ್ ವಿಷಯಗಳ ಮೇಲ್ವಿಚಾರಣೆಗೆ ದೇಶದಲ್ಲಿ ಈವರೆಗೆ ಯಾವುದೇ ವ್ಯವಸ್ಥೆ ಇರಲಿಲ್ಲ. ಇದರೊಂದಿಗೆ .. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸುವ ಕ್ರಮ ಜರುಗಲಿವೆ. ಚಲನಚಿತ್ರಗಳ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಅಶ್ಲೀಲ ದೃಶ್ಯಗಳು, ಚಿತ್ರಗಳು ಪ್ರಸಾರವಾಗುತ್ತಿರುವ ಹಿನ್ನಲೆಯಲ್ಲಿ ಡಿಜಿಟಲ್ ಕಂಟೆಂಟ್ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಈ ನಿರ್ಧಾರ ತೆಗೆದುಕೊಂಡಿದೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನೋಡಿಕೊಳ್ಳುತ್ತದೆ, ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಸಿಬಿಎಫ್‌ಸಿ ಚಲನಚಿತ್ರಗಳನ್ನು ನೋಡಿಕೊಳ್ಳುತ್ತದೆ. ಅಂತೆಯೇ ಕೇಂದ್ರ ಸರ್ಕಾರವೇ ನೇರವಾಗಿ ಡಿಜಿಟಲ್ ಕಂಟೆಂಟ್ ಮೇಲ್ವಿಚಾರಣೆ ಮಾಡಲಿದೆ. ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ನಿಯಂತ್ರಣ ವ್ಯವಸ್ಥೆ ಹಾಗೂ ಅದರ ಕಾರ್ಯಗಳನ್ನು ಪ್ರಕಟಿಸಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!