Bengaluru

ಪುರಸಭೆ ಸದಸ್ಯೆ ಕೈ ಹಿಡಿದು ಎಳೆದಾಡಿದ ಸಿದ್ದು ಸವದಿ ವರ್ತನೆ ಖಂಡನೀಯ; ಡಿ.ಕೆ.ಶಿವಕುಮಾರ

ಬೆಂಗಳೂರು, ನ.11- ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ವರ್ತನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಖಂಡಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ.

ಸುದ್ದಿಗಾರರಿಗೆ ನಗರದಲ್ಲಿಂದು ಈ ಸಂಬಂಧ ಪ್ರತಿಕ್ರಿಯಿಸಿದ ಶಿವಕುಮಾರ, ತೇರದಾಳದ ಘಟನೆ ಬಿಜೆಪಿಯ ಸಂಸ್ಕೃತಿ ಯನ್ನ ತೋರಿಸುತ್ತದೆ. ಇತರೆ ಪ್ರಕರಣಗಳಲ್ಲಿ ಪೊಲೀಸರು ಸುಮುಟೋ ದಾಖಲಿಸುತ್ತಾರೆ. ಆದರೆ ಈ ಪ್ರಕರಣದಲ್ಲಿ ಇನ್ನೂ ಯಾವುದೇ ಕ್ರಮ ಜರುಗಿಸಿಲ್ಲ. ಹೀಗೆ ಸದಸ್ಯೆಯನ್ನು ಎಳೆದಾಡಿರುವುದು ಸರಿಯೋ ತಪ್ಪೋ ಎನ್ನುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದೇನೆ ಎಂದರು.

ಶಾಸಕ ಭೀಮಾ ನಾಯಕ ತೊಡೆ ತಟ್ಟಿದ್ದು ಬೇರೆ. ಆ ವಿಚಾರದಲ್ಲಿ ಸಹಾ ಪ್ರತಿಪಕ್ಷ ನಾಯಕ ಮಾತನಾಡಿದ್ದಾರೆ. ಮತ್ತೆ ಆ ವಿಚಾರಕ್ಕೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಶಿವಕುಮಾರ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!