Bengaluru

ಸಚಿವ ಸ್ಥಾನ ನೀಡಿದರೆ ಸಂತೋಷ:ರೇಣುಕಾಚಾರ್ಯ

ಬೆಂಗಳೂರು, ನ 11- ಸಚಿವ ಸ್ಥಾನ ನೀಡುವಂತೆ ಯಾರ ಮೇಲೂ ಒತ್ತಡ ಹೇರುವುದಿಲ್ಲ. ಅವರಾಗಿಯೇ ಸಚಿವ ಸ್ಥಾನ ನೀಡಿದರೆ ಸಂತೋಷ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಪಕ್ಷವೇ ಕರೆದು ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವೀಕರಿಸುತ್ತೇನೆ. ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಮೊದಲ ಆದ್ಯತೆ ಎಂದರು.

ಮತಕ್ಷೇತ್ರ ಹೊನ್ನಾಳಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಲಾಗಿದೆಯೇ ವಿನಃ ಸಂಪುಟದ ಬಗ್ಗೆ ಚರ್ಚಿಸಲು ಅಲ್ಲ. ಸಂಪುಟ ಸೇರಲು ಯಾವ ಕಾರ್ಯತಂತ್ರ ಒತ್ತಡವೂ ಮಾಡಿಲ್ಲ. ನೀರಾವರಿ ಯೋಜನೆಗಳ ಬಗ್ಗೆ ರಮೇಶ್ ಜಾರಕಿಹೊಳಿ ಬಗ್ಗೆ ಚರ್ಚಿಸಿದ್ದೇನೆ. ಎಲ್ಲವನ್ನೂ ಭಗವಂತನ ಮೇಲೆ ಹಾಕಿರುವೆ ಎಂದು ರೇಣುಕಾಚಾರ್ಯ ಮಾರ್ಮಿಕವಾಗಿ ನುಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!