Dharwad

ಯೋಗೀಶಗೌಡ ಹತ್ಯೆ ತನಿಖಾಧಿಕಾರಿ ಟಿಂಗರಿಕರ ನಿರೀಕ್ಷಣಾ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಧಾರವಾಡ, ೧೧- ಬಿಜೆಪಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಅವರು ಧಾರವಾಡ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಅದಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿ ಸಿಬಿಐ ಪರ‌ ವಕೀಲರು ಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಟಿಂಗರಿಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಒಂದು ವಾರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್​ ಅದೇಶ ಹೊರಡಿಸಿದೆ. ಕೆಲ ದಿನಗಳ ಹಿಂದಷ್ಟೇ ಟಿಂಗರಿಕರ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್​ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.

ಯೋಗೀಶಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಟಿಂಗರಿಕರ ಅವರು ತನಿಖೆಗೆ ಅನಗತ್ಯ ವಿಳಂಬ ಹಾಗು ಮೇಲಾಧಿಕಾರಿಗಳ ಆಜ್ಞೆಯಂತೆ ನಡೆದುಕೊಂಡಿದ್ದಾರೆಂಬ ಆರೋಪವಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!