Bengaluru

ಲಿಂಗಾಯತರಿಗೆ ಶೇ.16 ರಷ್ಟು ಮೀಸಲಾತಿ ನೀಡಿ: ಈಶ್ವರ್ ಖಂಡ್ರೆ

ಬೆಂಗಳೂರು, ನ.17(ಯುಎನ್ಐ) ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶಿಸಿದೆ. ರಾಜಕೀಯ ಲಾಭಕ್ಕಾಗಿ ಈ ಪ್ರಯತ್ನ ನಡೆದಿದೆ. ಆದರೂ ನಿಗಮ ಸ್ಥಾಪನೆಗೆ ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ‌.

ಸುದ್ದಿಗಾರರೊಂದಿಗೆ ನಗರದಲ್ಲಿ ಪ್ರತಿಕ್ರಿಯಿಸಿದ ಖಂಡ್ರೆ, ಸರ್ಕಾರ ಬರೀ ನಿಗಮ ಸ್ಥಾಪನೆಗೆ ಆದೇಶ ಮಾಡಿದರಷ್ಟೆ ಸಾಲದು‌. ನಿಗಮಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು. ನಾಲ್ಕೈದು ಸಾವಿರ ಕೋಟಿ ರೂ.ಅನುದಾನ ಇಟ್ಟರೆ ಏನೇನೂ ಸಾಲದು. ವೀರಶೈವ ಲಿಂಗಾಯತ ಸಮುದಾಯ ದೊಡ್ಡದಿದ್ದು, ಯಡಿಯೂರಪ್ಪ ನಿಗಮದ ಹೆಸರಿನಲ್ಲಿ ಮೂಗಿಗೆ ತುಪ್ಪ ಸವರಿದರೆ ಯಾರೂ ಒಪ್ಪುವುದಿಲ್ಲ. ಇದರ ಜೊತೆ ಒಬಿಸಿ ಪಟ್ಟಿಯಲ್ಲೂ ಸೇರಿಸಬೇಕು. ಶೇ.16 ರಷ್ಟು ಮೀಸಲಾತಿಯನ್ನು ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!