Bengaluru

ಮಹಾರಾಷ್ಟ್ರ ಹೇಳಿಕೆ ಖಂಡಿಸಿದ ಕರ್ನಾಟಕ ಮುಖ್ಯಮಂತ್ರಿ

ಬೆಂಗಳೂರು, ೨೦- ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಭಾಗ ಎಂದಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ ಪವಾರ ಹೇಳಿಕೆ ಖಂಡನೀಯ, ಉದ್ಧಟತನದ ಮಾತುಗಳನ್ನಾಡಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಜಿತ ಪವಾರ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದರು.

ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ ಎಂದ ಅವರು, ಪ್ರಾಧಿಕಾರ ರಚನೆ ವಿರೋಧಿಸಿ ಡಿ 5 ರಂದು ಬಂದ್ ಮುಂತಾದ ಪ್ರತಿಭಟನೆಗೆ ಮುಂದಾದರೆ ಕಠಿಣ ಕ್ರಮ ಜರುಗಿಸುವದಾಗಿಯೂ ಅವರು ಎಚ್ಚರಿಕೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!