Bengaluru

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತೇಕ ಜಿಲ್ಲೆ ರಚನೆಗೆ ಸಂಪುಟ ಅಸ್ತು

ಬೆಂಗಳೂರು : ಆಡಳಿತದ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರತೇಕ ಜಿಲ್ಲೆ ಹೊಂದುವ ವಿಜಯನಗರ ಜನತೆಯ ಬಹುದಿನಗಳ ಬೇಡಿಕೆಯಂತೆ ಶೀಘ್ರ ಈಡೇರಲಿದೆ. ಇಂದಿನ ಸಂಪುಟ ಸಭೆಯಲ್ಲಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆ ರಚನೆ ಪ್ರಕ್ರಿಯೆ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ವಿಜಯನಗರ ಪ್ರತ್ಯೇಕ ಜಿಲ್ಲೆ ಕುರಿತು ಸರ್ಕಾರದ ನಿರ್ಧಾರವನ್ನು ಸಚಿವ ಆನಂದ್ ಸಿಂಗ್ ಸ್ವಾಗತಿಸಿದ್ದರೆ, ಶಾಸಕ ಸೋಮಶೇಖರ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!