Bengaluru

ಕೆಲವರನ್ನು ಕೈಬಿಟ್ಟು ಹಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಿ : ರೇಣುಕಾಚಾರ್ಯ

ಬೆಂಗಳೂರು,ನ 19- ಸಂಪುಟ ವಿಸ್ತರಣೆಗೆ ಮುಂದಾಗಿರುವ ಬೆನ್ನಲ್ಲೇ ಹಿರಿಯ ಶಾಸಕರಿಗೆ ಹಾಗೂ ತಮಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡ ಬೇಕು.ಕೆಲ ಸಚಿವರನ್ನು ಸಂಪುಟ ದಿಂದ ಮೂಲ ಬಿಜೆಪಿಗರಿಗೆ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾ ಚಾರ್ಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮನವಿ ಮಾಡಿದ್ದಾರೆ.

ಮಲ್ಲೇಶ್ವರಂ ಬಿಜೆಪಿಗೆ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂ.ಪಿ.ರೇಣುಕಾ ಚಾರ್ಯ ಕೆಲ ಸಚಿವರ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.

ಸರ್ಕಾರದಲ್ಲಿ ಕೆಲವು ಅಸಮರ್ಥ ಸಚಿವರಿದ್ದು ಅವರನ್ನು ಸಂಪುಟ ದಿಂದ ಕೈಬಿಟ್ಟು ಉಳಿದವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.ಆ ಮೂಲಕ ರಮೇಶ್ ಜಾರಕಿಹೊಳಿ ತಂಡದ ವಿರುದ್ಧ ರೇಣುಕಾಚಾರ್ಯ ದೂರು ನೀಡಿದ್ದಾರೆ ಎನ್ನಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಮಗೆ ಸಚಿವ ಸ್ಥಾನ ನೀಡಿ ಎನ್ನುವ ಬೇಡಿಕೆ ನನ್ನದಲ್ಲ.ನಮ್ಮ ಜಿಲ್ಲೆಗೆ ಅವಕಾಶ ಕೊಡಬೇಕು, ಗೆದ್ದಿರುವ ಹಿರಿಯರಿಗೆ ಅವಕಾಶ ಕೊಡಬೇಕು ಇದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿರುವುದಾಗಿ ಇರುವ ವಾಸ್ತವಾಂಶ ತಿಳಿಸುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ.ಯಾರನ್ನು ಸಂಫುಟಕ್ಕೆ ಸೇರಿಸಬೇಕು,ಯಾರನ್ನು ಕೈಬಿಡಬೇಕು ಎನ್ನುವುದು ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರು,ವರಿಷ್ಠರಿಗೆ ಬಿಟ್ಟ ನಿರ್ಧಾರ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದೆ.ಹೀಗಾಗಿ ಅಧಿಕಾರ ಅನುಭವಿಸಿರುವವರಲ್ಲಿ ಕೆಲವರನ್ನು ಸಂಪುಟದಿಂದ ಕೈ ಬಿಡಬೇಕಾ ಗುತ್ತದೆ.ಇದು ಬಹಳಷ್ಟು ಶಾಸಕರ ಅಭಿಪ್ರಾಯವಾಗಿದೆ.ಮೂರ್ನಾಲ್ಕು ಬಾರಿ ಗೆದ್ದವರನ್ನು ಮಂತ್ರಿ ಮಾಡಬೇಕಾಗುತ್ತದೆ, ರಾಜ್ಯಾಧ್ಯಕ್ಷರಿಗೆ ಈ ವಿಚಾರ ಹೇಳಿದ್ದೇವೆ.ಈ ವಿಚಾರವನ್ನು ನಾವು ಮುಖ್ಯಮಂತ್ರಿ ಅವರಿಗೂ ಹೇಳಿದ್ದೇವೆ. ಮುಂದಿನ ಉಪ ಚುನಾವಣೆ, ಗ್ರಾ.ಪಂ. ಜಿ.ಪಂ ಚುನಾವಣೆಯ ದೃಷ್ಟಿಯಿಂದ ತೀರ್ಮಾನ ಮಾಡಬೇಕು ಅಂತಾ ಹೇಳಿದ್ದೇವೆ. ನನಗೇ ಸಚಿವ ಸ್ಥಾನ ಕೊಡಬೇಕು ಎಂದು ಲಾಭಿ ಮಾಡಿಲ್ಲ. ಗೆದ್ದಿರುವ ಶಾಸಕರಿಗೆ ಕೊಡಬೇಕು ನಮ್ಮ ಜಿಲ್ಲೆ, ಮಧ್ಯ ಕರ್ನಾಟಕಕ್ಕೆ ಅವಕಾಶ ಕೊಡಿ ಅಂತಾ ಕೇಳಿದ್ದೇನೆ ಎಂದು ಹೇಳುವ ಮೂಲಕ ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿ ಎಂದು ಮನವಿ ಮಾಡಿದರು.

ಸಿ.ಪಿ.ಯೋಗೇಶ್ವರ ಪರ ಸಚಿವ ರಮೇಶ ಜಾರಕಿಹೊಳಿ ಲಾಭಿ ನಡೆಸುತ್ತಿದ್ದಾರೆ ಎಂಬ ಪ್ರಶ್ನೆಗೆ ಅಸಮಾಧಾನಗೊಂಡ ಅವರು, ರಾಮ ರಾಮ ರಾಮ ಅಂತಾ ಹೇಳುತ್ತಾ ಹೋದರೆ ಅವರು ರಾಮ ಆಗುತ್ತಾರೆ. ನಾನು ಯಾವುದನ್ನು ಎಲ್ಲಿಗೆ ಮುಟ್ಟಿಸಬೇಕೋ ಅದನ್ನು ಮುಟ್ಟಿಸಿದ್ದೇನೆ. ನನ್ನ ಬಾಯಲ್ಲಿ,ಅವರ ಹೆಸರು ಹೇಳುವುದಿಲ್ಲ. ಅವರೇನು ಅಷ್ಟು ದೊಡ್ಡವರಾ, ಪಕ್ಷಕ್ಕಿಂತ ದೊಡ್ಡವರಾ ಎಂದು ಪ್ರಶ್ನಿಸಿದರು. ಕೆಲವರು ಸಭೆ ಸೇರಿ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ. ನಮಗೂ ಸಭೆ ಮಾಡಲು ಬರುತ್ತದೆ. 40 ಜನ ಶಾಸಕರ ಬೆಂಬಲ ತಮಗೆ ಇದೆ ನಾವು ಸಭೆ ಮಾಡುತ್ತೇವೆ ಎಂದು ಪರೋಕ್ಷವಾಗಿ ಸಚಿವ ಸ್ಥಾನಕ್ಕಾಗಿ ಬಂಡಾಯವೇಳಲು ಸಿದ್ದವೆಂಬ ಸಂದೇಶವನ್ನು ರವಾನಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!