Bellary

ಜಿಲ್ಲೆ ವಿಭಜನೆ ಖಂಡಿಸಿ ಬಳ್ಳಾರಿ ಬಂದ್

ಬಳ್ಳಾರಿ, 19- ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ, ಪ್ರತಿಭಟನಾತ್ಮವಾಗಿ ನಾಳೆ ಬಳ್ಳಾರಿ ಬಂದ್‍ ಆಚರಿಸಲು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನಿರ್ಧರಿಸಿದೆ.

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಹೊಸ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಹಲವು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೆ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಸರಕಾರದ ಈ ನಿರ್ಧಾರವನ್ನು ಖಂಡಿಸಿ, ಬಂದ್ ಗೆ ಜನ ಬೆಂಬಲ ಕೊಡುವಂತೆ ವಿನಂತಿಸಿಕೊಂಡಿದೆ.

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಕುರಿತು ಬುಧವಾರ ಮಾತನಾಡಿದ್ದ ಅರಣ್ಯ ಸಚಿವ ಆನಂದ ಸಿಂಗ್, ಹಲವು ದಿನಗಳ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದರು. ಮತ್ತೊಂದೆಡೆ ಬಳ್ಳಾರಿ ಜಿಲ್ಲೆಯನ್ನು ಬಿಜೆಪಿ ಸರಕಾರ ಇಬ್ಭಾಗ ಮಾಡಿ ಜನರಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!