Patna

ಭ್ರಷ್ಟಾಚಾರದ ಆರೋಪ: ಬಿಹಾರದಲ್ಲಿ ಮೂರೇ ದಿನಕ್ಕೆ ಮೊದಲ ವಿಕೆಟ್ ಪತನ

ಪಾಟ್ನಾ, ನ. 19 (ಯುಎನ್ಐ) ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಹೊಸನಿತೀಶ್ ಸರ್ಕಾರ ರಚನೆಯಾಗಿ ಒಂದು ವಾರ ಕಳೆಯುವುದರೊಳಗಾಗಿಯೇ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿದ್ದ ಸಚಿವರೊಬ್ಬರ ರಾಜಿನಾಮೆಯೊಂದಿಗೆ ಮೊದಲ ವಿಕೆಟ್ ಪತನಗೊಂಡಿದೆ.

ಶಿಕ್ಷಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮೇವಾಲಾಲ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ತಮ್ಮದೇ ಸಂಪುಟ ಸಚಿವರ ವಿರುದ್ಧ ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂದು ರಾಷ್ಟ್ರೀಯ ಜನತಾ ದಳ ಪ್ರಶ್ನೆ ಮಾಡಿತ್ತು.

ಬಿಹಾರದ ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮೇವಾಲಾಲ್ ಚೌಧರಿ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪವಿದೆ.

2017ರಲ್ಲಿ ಭಗಲ ಪುರ್ ಸಬುರ್ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಹಾಗೂ 161 ಸಹಾಯಕ ಪ್ರಾಧ್ಯಾಪಕರ ನೇಮಕಕಾತಿಯಲ್ಲಿ ಅಕ್ರಮ, ಹಗರಣ ಮಾಡಿದ್ದ ಗುರುತರ ಆರೋಪ ಕೇಳಿ ಬಂದಿದೆ.

ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲೂ ಅಕ್ರಮ ಎಸಗಿರುವ ಬಗ್ಗೆ ಮೇವಾಲಾಲ್ ಚೌಧರಿ ವಿರುದ್ಧ ಆರೋಪಿಸಲಾಗಿದೆ.ಬಿಹಾರದ 243 ವಿಧಾನಸಭಾ ಸದಸ್ಯ ಬಲವಿದ್ದು, ಯಾವುದೆ ಪಕ್ಷಕ್ಕೆ ಸರ್ಕಾರ ರಚಿಸಲು ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳು ಬೇಕು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) 125 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ.

Leave a Reply

Your email address will not be published. Required fields are marked *

Back to top button
error: Content is protected !!