Bengaluru

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕೊರೊನಾ

ಬೆಂಗಳೂರು, ನ.19 (ಯುಎನ್ಐ) ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮಗೆ ಕೋವಿಡ್-19 ದೃಢಪಟ್ಟಿರುವುದಾಗಿ ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದಾರೆ.

ಕೊರೊನಾದ ಆರಂಭಿಕ ಲಕ್ಷಣಗಳ ನಂತರ ತಾವು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ. ವೈದ್ಯಕೀಯ ವರದಿಯಲ್ಲಿ ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಸದ್ಯ ತಾವು ಐಸೋಲೇಷನ್ಗೆ ಒಳಗಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಜಾಗರೂಕರಾಗಿರಿ ಮತ್ತು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!