Bengaluru

ರಾಜ್ಯದ 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಬೆನ್ನಲ್ಲೇ 70 ವಿದ್ಯಾರ್ಥಿಗಳಿಗೆ, 7 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 57, ಬೆಳಗಾವಿಯ 7 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭವಾಗಿದ್ದು, ಕಾಲೇಜು ಆರಂಭವಾದ ಮೂರು ದಿನಗಳ ಅವಧಿಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 77 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ.

ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜ್ ಆರಂಭಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!