Bengaluru

ಪದವಿಪೂರ್ವ ಉಪನ್ಯಾಸಕರ‌ ಭರ್ತಿಗೆ ಶೀಘ್ರ ಕ್ರಮ : ಸಚಿವ ಸುರೇಶ ಕುಮಾರ

ಬೆಂಗಳೂರು,ನ 20(ಯುಎನ್ಐ)ಪದವಿಪೂರ್ವ ಶಿಕ್ಷಣ‌ ಇಲಾಖೆಯಲ್ಲಿ ನೇರ‌ ನೇಮಕಾತಿಗೆ ಲಭ್ಯವಿರುವ ಸುಮಾ ರು ಒಂದು ಸಾವಿರ ಹುದ್ದೆಗಳನ್ನು ತುಂಬಲು‌ ಮುಂದಿನ ಆರು ತಿಂಗಳ‌ ಅವಧಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಮುಖ್ಯಮಂತ್ರಿಗಳ‌ ಅಧ್ಯಕ್ಷತೆಯಲ್ಲಿ‌ ಪದವಿಪೂರ್ವ ಶಿಕ್ಷಣ‌ ಇಲಾಖೆಗೆ ಹೊಸದಾಗಿ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಸಾಂಕೇತಿಕ ನೇಮಕಾತಿ ಆದೇಶ ವಿತರಣಾ‌ ಕಾರ್ಯಕ್ರಮದಲ್ಲಿ‌ ಮಾತನಾಡಿದ ಸಚಿವರು ಇಷ್ಟರಲ್ಲಿ ಯೇ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದೆಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ವಿಷಯಗಳ 1194 ಉಪನ್ಯಾಸಕ ಅಭ್ಯರ್ಥಿಗಳನ್ನು ಕರ್ನಾಟಕ ಪರೀ ಕ್ಷಾ ಪ್ರಾಧಿಕಾರ ಆಯ್ಕೆ ಮಾಡಿದೆ. ಅವರಲ್ಲಿ 1161 ಮಂದಿ ಈಗಾಗಲೇ ಸ್ಥಳ ನಿಯುಕ್ತಿ ಮಾಡಿಕೊಂಡಿದ್ದಾರೆ. 120 3 ಉಪನ್ಯಾಸಕರ ಆಯ್ಕೆಗೆ 2015ರಿಂದ ಪ್ರಕ್ರಿಯೆ ಶುರುವಾಗಿತ್ತು.ಆದರೆ ಅದು ಅರ್ಜಿ ಕರೆದುದರ ಹೊರತಾಗಿ ಮುಂದೆ ಹೋಗಿರಲಿಲ್ಲ. 2019ರಲ್ಲಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ ರ ಈ ಪ್ರಕ್ರಿಯೆಗೆ ವೇಗ ದೊರಕಿತು.ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ವೇಗ ದೊರಕಿತು.ಉಪನ್ಯಾಸಕರ ಆಯ್ಕೆ ಪೂರ್ಣಗೊಂಡು ಸ್ಥಳ ನಿಯುಕ್ತಿ ಮಾಡಿ ಇಂದು ಆದೇಶ ನೀಡುತ್ತಿದ್ದೇವೆ.ಈ ಕೆಲಸ ಇನ್ನೂ ಆರು ತಿಂಗಳ ಮೊದಲೇ ನಡೆಯಬೇಕಿತ್ತು.ಆದರೆ ಕೋವಿಡ್-19 ಪ್ರಸರಣದಿಂದಾಗಿ ಲಾಕ್‍ಡೌನ್ ಹಿನ್ನೆಲೆ ಹಾಗೂ ಶಾಲಾ ಕಾಲೇಜುಗಳು ಪುನರಾರಂಭವಾಗುವುದರ ಅನಿಶ್ಚಿತ ವಾತಾವರಣದ ಹಿನ್ನೆಲೆಯಲ್ಲಿ ಈಗ ಇದಕ್ಕೆ ಮಹೂರ್ತ ನಿಗದಿಯಾಗಿದೆ.ತಾವು ಇಲಾಖೆಯ ಸಚಿ ವರಾದ ಮಾರನೇ ದಿನವೇ ಈ ಕುರಿತು ಅಧಿಕಾರಿಗಳ ಸಭೆ ನಡೆಸಿದೆ. ಸಚಿವನಾಗಿ ನಾನು ಕೈಗೆತ್ತಿಕೊಂಡ ಮೊದಲ ಕೆಲಸ ಇದು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತದೆ ಎಂದು‌ ಅವರು ಹೇಳಿದರು.

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು,ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು,ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದ ಅವರು, ರಾಜ್ಯದಲ್ಲಿ ಇರುವ 1231 ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ 12,857 ಉಪನ್ಯಾಸಕ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 10370 ಉಪನ್ಯಾಸಕರ ಸ್ಥಾನಗಳು ಭರ್ತಿಯಾಗಿದ್ದು, 2487 ಹುದ್ದೆಗಳು ಖಾಲಿಯಾಗಿವೆ. ಈ ಖಾಲಿಯಾದ ಹುದ್ದೆಗಳಿಗೆ ಈಗ ನೇಮಕ ಮಾಡಿರುವ 1196 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರ ಹೊರತಾಗಿಯೂ ಉಳಿಯುವ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಸರ್ಕಾರ ಕ್ರಿಯಾ ಯೋಜನೆ ರೂಪಿಸುತ್ತಿದೆ. ಮುಂದಿನ ಆರು ತಿಂಗಳ ಅವಧಿಯಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!