Belagavi

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಒಂದೇ ಇಲಾಖೆಯಾಗಿಸಲು ಚಿಂತನೆ

ಬೆಳಗಾವಿ, ನ 21- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್ ಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದ ಅವರು, ಈ ಎರಡೂ ಇಲಾಖೆಗಳು ಒಂದೇ ನಿರ್ವಹಣೆಯಲ್ಲಿರಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎರಡೂ ಇಲಾಖೆಗಳ ಹೊಣೆಯನ್ನು ನನಗೆ ನೀಡಿದ್ದಾರೆ. ಇದರಿಂದ ಆರೋಗ್ಯ ಕ್ಷೇತ್ರದ ನಿರ್ವಹಣೆ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಬಗೆಯ ಪರೀಕ್ಷೆಗಳನ್ನು ಜನವರಿಯಿಂದಲೇ ಉಚಿತವಾಗಿ ಮಾಡಲಾಗುವುದು ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಶೌಚಾಲಯ, ವಾರ್ಡ್ ಸ್ವಚ್ಛವಿಲ್ಲ ಎಂಬ ಆಪಾದನೆ ಇದೆ. ಬೆಳಗಾವಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ತಿಂಗಳಿಗೆ 36 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಆದರೂ ಸ್ವಚ್ಛತೆ ವಿಚಾರದಲ್ಲಿ ನಿರ್ಲಕ್ಷ್ಯತೆ ಇರುವುದನ್ನು ಸಹಿಸಲು ಸಾಧ್ಯವಿಲ್ಲ. ಖಾಸಗಿಗಿಂತ ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಖರ್ಚು ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಸಿಗುವ ಸೌಲಭ್ಯ ಹಾಗೂ ಅವರು ಮಾಡುವ ಸೇವೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲೂ ದೊರೆಯಬೇಕು. ಎಲ್ಲರೂ ಈ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೋವಿಡ್ ಲಸಿಕೆ ಬಂದ ನಂತರ ವಿತರಣೆಯಲ್ಲಿ ತೊಂದರೆ ಆಗಬಾರದೆಂದು ಈಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಲಸಿಕೆ ಸಂಗ್ರಹಣೆಗೆ ಎಲ್ಲ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ ತಿಳಿಸಿದರು.

ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ವೈದ್ಯಾಧಿಕಾರಿಗಳು ವಾರದಲ್ಲಿ ಒಂದೆರಡು ದಿನ ಪ್ರವಾಸ ಮಾಡಿ, ಸ್ಥಳೀಯ ಸರ್ಕಾರಿ ಆರೋಗ್ಯ ಸೇವೆಯಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಜನಸಂಖ್ಯೆಗೆ ತಕ್ಕಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಸಚಿವ ಸುಧಾಕರ ಹೇಳಿದರು.

ಕೋವಿಡ್ ನಿಯಂತ್ರಣದಲ್ಲಿ ಬೆಳಗಾವಿ ಮಾದರಿ. ಈ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೊಳಗಾದವರಲ್ಲಿ ಶೇ 97 ರಷ್ಟು ಮಂದಿ ಗುಣಮುಖರಾಗಿದ್ದಾರೆ. 2 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ. ಕೋವಿಡ್ ಮರಣ ಪ್ರಮಾಣ 0.8% ರಷ್ಟಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!