Bengaluru

ಬೆಳಗಾವಿ ಉಪ ಚುನಾವಣೆ ಸತೀಶ ಜಾರಕಿಹೊಳಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು, ನ 22 – ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸಿದ್ದಾರೆ.

ಮಾಜಿ ಗೃಹ ಸಚಿವ, ಕಾಂಗ್ರೆಸ್ ಮುಖಂಡ ಎಂ ಬಿ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸತೀಶ ಜಾರಕಿಹೊಳಿ ಹೆಸರು ಶಿಫಾರಸ್ಸುಗೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಎಐಸಿಸಿಗೆ ಸತೀಶ ಜಾರಕಿಹೊಳಿ ಹೆಸರು ಕಳಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಅನಿಲ ಲಾಡ್ ಮತ್ತು ಶಾಸಕಿ ಅಂಜಲಿ ಲಿಂಬಾಳ್ಕರ ಅವರ ಹೆಸರು ಸಹ ರೇಸ್ ನಲ್ಲಿ ಕೇಳಿ ಬಂದಿದೆ.

ಬೆಳಗಾವಿ ಭಾಗದಲ್ಲಿ ಸತೀಶ ಜಾರಕಿಹೊಳಿ ಪ್ರಬಲರಾಗಿದ್ದು ಇವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಮಾಜಿ ಶಾಸಕ ಫಿರೋಜ ಸೇಠ್ ಸಮ್ಮತಿ ಸೂಚಿಸಿದ್ದು, ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಬಲ ಅಭ್ಯರ್ಥಿಯಾಗಿ ಸತೀಶ ಜಾರಕಿಹೊಳಿ ಹೊರ ಹೊಮ್ಮಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!