New Delhi

ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಗೆ ಅನುಮತಿ: ಐಎಂಎ ಖಂಡನೆ

ನವದೆಹಲಿ, ನ 22- ದೇಶದಲ್ಲಿ ಆಯುರ್ವೇದ ತಜ್ಞ ವೈದ್ಯರಿಗೂ ಕೂಡಾ ಹಲವು ವಿಭಾಗಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಲಾಗಿದೆ.

ಆಯುರ್ವೇದದ ಸ್ನಾತಕೋತ್ತರ ಪದವಿ ಪಡೆದವರಿಗೆ ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂಳೆಚಿಕಿತ್ಸೆ, ನೇತ್ರಶಾಸ್ತ್ರ, ಇಎನ್ಟಿ ಮತ್ತು ದಂತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ವಿಧಾನಗಳನ್ನು ನಿರ್ವಹಿಸಲು ಅವಕಾಶ ನೀಡಲಾಗಿದೆ.

ಆಯುರ್ವೇದ ವಿಭಾಗದಲ್ಲಿ ಪದವಿ ಪಡೆದವರಿಗೆ ವಿಶೇಷ ತರಬೇತಿ ನೀಡುವುದಕ್ಕೆ ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸನ್ ಅನುಮತಿ ನೀಡಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಾಂಪ್ರದಾಯಿಕ ಚಿಕಿತ್ಸಾ ವಿಧಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.

ಹೊಸ ಗೆಜೆಟ್ ಅಧಿಸೂಚನೆಯ ಪ್ರಕಾರ, ಶಸ್ತ್ರಚಿಕಿತ್ಸಾ ವಿಧಾನಗಳ ತರಬೇತಿ ಮಾದರಿಯನ್ನು ಆಯುರ್ವೇದ ಅಧ್ಯಯನದ ಪಠ್ಯಕ್ರಮದಲ್ಲಿ ಸೇರಿಸಲಾಗುತ್ತದೆ.. ಆಯುರ್ವೇದ ಅಭ್ಯಾಸ ಮಾಡುವ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶಸ್ತ್ರಚಿಕಿತ್ಸೆಯನ್ನು ಅಭ್ಯಾಸ ಮಾಡಲು ಅನುವು ಮಾಡಿಕೊಡಲಾಗುವುದು.

ವಿದ್ಯಾರ್ಥಿಗಳಿಗೆ ಎರಡು ಹಂತದ ಶಸ್ತ್ರಚಿಕಿತ್ಸೆಯಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆದರೆ ಈ ಕ್ರಮವನ್ನು ಭಾರತೀಯ ವೈದ್ಯಕೀಯ ಸಂಘ ಬಲವಾಗಿ ವಿರೋಧಿಸಿದೆ. ಇದು ಗೊಂದಲಕ್ಕೆ ಎಡೆ ಮಾಡಿಕೊಡಲಿದ್ದು ಕೂಡಲೇ ಈ ಆದೇಶವನ್ನು ವಾಸಪ್ ಪಡೆಯಬೇಕು ಎಂದೂ ಆಗ್ರಹ ಪಡಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!