LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್ ಅಕ್ರಮ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ

ಬೆಳಗಾವಿ, ಜುಲೈ 24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ನ್ಯಾಯಾಂಗ ಅಥವಾ ಸ್ವತಂತ್ರ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಆದರ್ಶ ಗಸ್ತಿ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಮಾಡಿದ ದ್ರೋಹವಾಗಿದೆ. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಕ್ಷಣ ರಾಜೀನಾಮೆ ನೀಡಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಸುದೀಪ ಐಹೊಳೆ ಮಾತನಾಡಿ, ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಸರ್ಕಾರ ಕೈಬಿಟ್ಟು ಅವರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಸಂಘಟಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನೋರ್ವ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಸನದಿ ಮಾತನಾಡಿ, ಪ್ರತಿ ವರ್ಷ ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಆರೋಪಗಳು ಕೇಳಿಬರುತ್ತಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಕುಂದಿಸಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ವ್ಯವಸ್ಥೆಗೆ ಶಾಶ್ವತ ಪರಿಹಾರ ಕಂಡುಹಿಡಿದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಿವಂ ಕಾಂಬಳೆ, ರಾಮಕುಮಾರ ಕಾಂಬಳೆ ಸೇರಿದಂತೆ ದಲಿತ ವಿದ್ಯಾರ್ಥಿ ಪರಿಷತ್ತಿನ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಅಕ್ರಮ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಮೆಲೋನಿ ಇನ್‌ಸ್ಟಾಗ್ರಾಂನಲ್ಲಿ ಮೋದಿ ರಾಜೀನಾಮೆಗೆ ಒತ್ತಾಯ; ವಿದ್ಯಾರ್ಥಿಗಳ ಅಭಿಯಾನ ವೈರಲ್ ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? : ಸಿ.ಟಿ. ರವಿಭೂಕುಸಿತದಿಂದ ಟಾಟಾ ಸುಮೋ ಮೇಲೆ ಬಿದ್ದ ಬಂಡೆ: 6 ತಿಂಗಳ ಮಗು ಸೇರಿ 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ಭ್ರಷ್ಟ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ: ರಾಹುಲ್ ಗಾಂಧಿಪ್ರಧಾನ್ ರಾಜೀನಾಮೆ ಕುರಿತು ನಾಳೆ ತೀರ್ಮಾನ; ಎರಡು ಬೇಡಿಕೆಗಳಿಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸಿಜೆಪಿಪೆಲೆಟ್ ಗನ್ ಬಳಕೆ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ